July 2022

ಬಂಟ್ವಾಳ: ಜೇನುತುಪ್ಪ ಬದಲು ಬೆಲ್ಲದ ಪಾಕ ಮಾರಾಟ; ಕಾರ್ಮಿಕರಿಗೆ ಧರ್ಮದೇಟು

ಸಮಗ್ರ ನ್ಯೂಸ್: ಬಿ.ಸಿ.ರೋಡ್‌ ಸಮೀಪದ ಕೈಕಂಬದಲ್ಲಿ ಗುರುವಾರ ಬೆಳಗ್ಗೆ ಕಟ್ಟಡದ ಮೇಲೆ ಕಟ್ಟಿದ್ದ ಜೇನುಗೂಡಿಂದ ಜೇನು ತೆಗೆದು ಕೊಡುತ್ತೇವೆ ಎಂದು ಜನರನ್ನು ವಂಚಿಸಿ ಬೆಲ್ಲದ ಪಾಕ ಮಾರಾಟ ಮಾಡುತ್ತಿದ್ದ ನಕಲಿ ಜೇನು ಮಾರಾಟಗಾರರ ತಂಡಕ್ಕೆ ಜನರು ಧರ್ಮದೇಟು ನೀಡಿ ಓಡಿಸಿದ್ದಾರೆ. ಕೈಕಂಬ ಜಂಕ್ಷನ್‌ನಲ್ಲಿರುವ ಕಟ್ಟಡದ ಮೇಲಂತಸ್ತಿನಲ್ಲಿ ಜೇನು ಗೂಡು ಕಟ್ಟಿತ್ತು. ಜೇನು ಗೂಡನ್ನು ತೆರವುಗೊಳಿಸಿಕೊಡುವುದಾಗಿ ಅನ್ಯರಾಜ್ಯದ ಕಾರ್ಮಿಕರ ತಂಡ ಆಗಮಿಸಿತ್ತು. ಇತ್ತೀಚೆಗಷ್ಟೆ ಗೂಡು ಕಟ್ಟಿದ್ದರಿಂದ ಅದರಲ್ಲಿ ಜೇನು ಸಂಗ್ರಹಗೊಂಡಿರಲಿಲ್ಲ. ಈ ನಡುವೆ ತಂಡ ಬೆಲ್ಲಪಾಕ ಹಾಗೂ ಜೇನು […]

ಬಂಟ್ವಾಳ: ಜೇನುತುಪ್ಪ ಬದಲು ಬೆಲ್ಲದ ಪಾಕ ಮಾರಾಟ; ಕಾರ್ಮಿಕರಿಗೆ ಧರ್ಮದೇಟು Read More »

ಇನ್ಮುಂದೆ ಕಚೇರಿಗಳಲ್ಲಿ ಅನಧಿಕೃತವಾಗಿ ಫೋಟೋ, ವಿಡಿಯೋ ಮಾಡುವಂತಿಲ್ಲ| ರಾಜ್ಯ ಸರ್ಕಾರದಿಂದ ‌ಮಹತ್ವದ ಆದೇಶ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ ಅಥವಾ ವಿಡಿಯೋ ಮಾಡದಂತೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಎಲ್ಲಾ ಜಿಲ್ಲೆ, ತಾಲೂಕು ಹಾಗೂ ರಾಜ್ಯ ಮಟ್ಟದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಅವರ ಕೆಲಸ ಕಾರ್ಯಗಳ ನಿಮಿತ್ತ ಆಗಮಿಸುವುದು ಸರ್ವೆ ಸಾಮಾನ್ಯವಾಗಿದ್ದು, ಕೆಲವು ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿಗಳಿಗೆ ಕಚೇರಿ ವೇಳೆಯಲ್ಲಿ ಬಂದು ಕಚೇರಿಯ ಫೋಟೋ/ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ

ಇನ್ಮುಂದೆ ಕಚೇರಿಗಳಲ್ಲಿ ಅನಧಿಕೃತವಾಗಿ ಫೋಟೋ, ವಿಡಿಯೋ ಮಾಡುವಂತಿಲ್ಲ| ರಾಜ್ಯ ಸರ್ಕಾರದಿಂದ ‌ಮಹತ್ವದ ಆದೇಶ Read More »

ನಟ ಪ್ರತಾಪ್ ಅವರು ಚೆನ್ನೈ ಅಪಾರ್ಟ್ಮೆಂಟ್ ನಲ್ಲಿ ಶವವಾಗಿ ಪತ್ತೆ

ಮಲಯಾಳಂ ಚಿತ್ರರಂಗದಲ್ಲಿ ನಟ ಮತ್ತು ನಿರ್ದೇಶಕನಾಗಿ ತೊಡಗಿಸಿಕೊಂಡಿರುವ ನಟ ಪ್ರತಾಪ್ ಪೋಥೆನ್ ಚೆನ್ನೈ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 69 ವರ್ಷದ ನಟ ಸುಮಾರು 12 ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಎಂದಿನಂತೆ ಮನೆ ಕೆಲಸ ಮಾಡಲು ಕೆಲಸದವರು ಬಂದಾಗ ಪ್ರತಾಪ್ ಪೋಥೆನ್ ಮೃತ ದೇಹವನ್ನು ಬೆಡ್‌ರೂಮ್‌ನಲ್ಲಿ ನೋಡಿ ಶಾಕ್ ಆಗಿದ್ದಾರೆ. 100ಕ್ಕೂ ಹೆಚ್ಚು ಮಲಯಾಳಂ, ಹಿಂದಿ, ತೆಲುಗು ಮತ್ತು ತಮಿಳು ಸಿನಿಮಾಗಳಲ್ಲಿ ಪ್ರತಾಪ್ ಪೋಥೆನ್ ಅಭಿನಯಿಸಿದ್ದಾರೆ. 1979ರಲ್ಲಿ ಆರವ್‌ ಸಿನಿಮಾ ಮೂಲಕ ಪ್ರತಾಪ್ ಪೋಥೆನ್ ಅವರನ್ನು ಭರತ್ ಚಿತ್ರರಂಗಕ್ಕೆ

ನಟ ಪ್ರತಾಪ್ ಅವರು ಚೆನ್ನೈ ಅಪಾರ್ಟ್ಮೆಂಟ್ ನಲ್ಲಿ ಶವವಾಗಿ ಪತ್ತೆ Read More »

ಮತ್ತೆ ನಡುಗಿದ ಕೊಡಗು ಗಡಿಭಾಗ; ಆತಂಕಗೊಂಡ ಜನತೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ಮತ್ತೆ ಭೂಕಂಪದ ಅನುಭವವಾಗಿದೆ. ಜಿಲ್ಲೆಯ ಚೆಂಬು ಕೂಡಡ್ಕ ಪರಿಸರದಲ್ಲಿ ಇಂದು ಬೆಳಿಗ್ಗೆ 10:10ರ ಸುಮಾರಿಗೆ ಭೂಮಿ ನಡುಗಿದ್ದು ಜನತೆ ಆತಂಕಗೊಂಡಿದ್ದಾರೆ. ಕಳೆದೊಂದು ತಿಂಗಳಿನಿಂದ ಹಲವು ಬಾರಿ ಚೆಂಬು, ಸಂಪಾಜೆ,‌ ಪೆರಾಜೆ, ತೊಡಿಕಾನ, ಅರಂತೋಡು ಭಾಗಗಳಲ್ಲಿ ‌ಭೂಮಿ ಕಂಪಿಸುತ್ತಿದ್ದು, ಜನರು ಜೀವಭಯದಿಂದಲೇ ಬದುಕುವಂತಾಗಿದೆ.

ಮತ್ತೆ ನಡುಗಿದ ಕೊಡಗು ಗಡಿಭಾಗ; ಆತಂಕಗೊಂಡ ಜನತೆ Read More »

ಉಡುಪಿ ಹಿಸ್ಟರಿಯಲ್ಲೇ ಇದೊಂದು ಖತರ್ನಾಕ್ ಕ್ರೈಂ| ಬಂಧನದಿಂದ ತಪ್ಪಿಸಿಕೊಳ್ಳಲು ತನ್ನದೇ ವಯಸ್ಸಿನ ವ್ಯಕ್ತಿಗೆ ನಿದ್ರೆಯ ಮಾತ್ರೆ ಕೊಟ್ಟು ಕೊಲೆ| ಮಾಡಿದ್ದ ಪ್ಲಾನ್‍ನಿಂದಲೇ ಸಿಕ್ಕಿಬಿದ್ದ ಜೋಡಿ

ಸಮಗ್ರ ನ್ಯೂಸ್: ತಡರಾತ್ರಿ ಸುಟ್ಟು ಕರಕಲಾಗಿದ್ದ ಕಾರಿನೊಳಗೆ ಪೂರ್ಣ ಸುಟ್ಟ ಅಸ್ಥಿಪಂಜರವೊಂದು ಬೆಳಗ್ಗಿನ ಜಾವ ಕಾಣಿಸಿಕೊಂಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಪೊಲೀಸರು 24 ಗಂಟೆಯೊಳಗೆ ತನಿಖೆ ಮಾಡಿದ್ದಾರೆ. ತನಿಖೆಯಾಗುತ್ತಾ ಹೊರಬಂದ ಸತ್ಯಕ್ಕೆ ಇಡೀ ಉಡುಪಿ ಶಾಕ್ ಗೆ ಒಳಗಾಗಿದೆ. ಸುಟ್ಟು ಕರಕಲಾದ ಕಾರು. ಕಾರಿನೊಳಗೆ ತಲೆಬುರುಡೆ ಎಲುಬು. ಪುಟ್ಟದಾದರೂ ಕ್ಲೂ ಸಿಗುತ್ತಾ ಅಂತ ಹುಡುಕಾಡುತ್ತಿರೋ ಪೊಲೀಸರು. ಈ ದೃಶ್ಯ ಕಂಡುಬಂದಿದ್ದು ಜಿಲ್ಲೆಯ ಹೇನಬೇರು ಗ್ರಾಮದಲ್ಲಿ. ಇಲ್ಲಿ ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದ್ದು ನಿನ್ನೆ ಬೆಳಕಿಗೆ

ಉಡುಪಿ ಹಿಸ್ಟರಿಯಲ್ಲೇ ಇದೊಂದು ಖತರ್ನಾಕ್ ಕ್ರೈಂ| ಬಂಧನದಿಂದ ತಪ್ಪಿಸಿಕೊಳ್ಳಲು ತನ್ನದೇ ವಯಸ್ಸಿನ ವ್ಯಕ್ತಿಗೆ ನಿದ್ರೆಯ ಮಾತ್ರೆ ಕೊಟ್ಟು ಕೊಲೆ| ಮಾಡಿದ್ದ ಪ್ಲಾನ್‍ನಿಂದಲೇ ಸಿಕ್ಕಿಬಿದ್ದ ಜೋಡಿ Read More »

ಶಿರಾಡಿ, ಚಾರ್ಮಾಡಿ ಘಾಟ್ ನಲ್ಲಿ ಭೂಕುಸಿತ| ಘನವಾಹನ ಸಂಚಾರಕ್ಕೆ ನಿಷೇಧ

ಸಮಗ್ರ ನ್ಯೂಸ್: ರಾಜ್ಯದ ಬಯಲುಸೀಮೆಯನ್ನು ಕರಾವಳಿಯೊಂದಿಗೆ ಸಂಪರ್ಕಿಸುವ ಶಿರಾಡಿ ಮತ್ತು ಚಾರ್ಮಾಡಿ ಘಾಟ್‌ ರಸ್ತೆಗಳಲ್ಲಿ ಗುರುವಾರ ಮತ್ತೆ ರಸ್ತೆ ಕುಸಿತವಾಗಿದ್ದು, ಸಂಚಾರ ಬಂದ್‌ ಆಗುವ ಭೀತಿ ಎದುರಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ಮತ್ತು ಕರಾವಳಿ ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬರುವ ಶಿರಾಡಿ ಘಾಟ್‌ನ ದೋಣಿಗಲ್‌ನಲ್ಲಿ ವಾರದ ಬಳಿಕ ಮತ್ತೆ ರಸ್ತೆ ಕುಸಿತವಾಗಿದೆ. ಇದರಿಂದಾಗಿ ಅಲ್ಲಿ ಭಾರಿ ವಾಹನ ಸಂಚಾರ ನಿಷೇಧಿಸಲಾಗಿದೆ. ಇಲ್ಲಿ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಏಕಮುಖ ವಾಹನ ಸಂಚಾರಕ್ಕೆ

ಶಿರಾಡಿ, ಚಾರ್ಮಾಡಿ ಘಾಟ್ ನಲ್ಲಿ ಭೂಕುಸಿತ| ಘನವಾಹನ ಸಂಚಾರಕ್ಕೆ ನಿಷೇಧ Read More »

ಸವಣೂರು: ಎರಡು ತಿಂಗಳ ಹಿಂದೆ ಖರೀದಿಸಿದ್ದ ಕಾರು ಬೆಂಕಿಗಾಹುತಿ

ಸಮಗ್ರ ನ್ಯೂಸ್: ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಹೊತ್ತಿ ಉರಿದ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಕುಣಿಮೆಳ್ಳಿಹಳ್ಳಿ ಗ್ರಾಮದ ಸಮೀಪ ಗದಗ-ಹಾವೇರಿ ರಾಷ್ಟ್ರೀಯ ಹೆದ್ದಾರಿ- 4ರಲ್ಲಿ ನಡೆದಿದೆ. ಗದಗ ನಗರದ ನಿವಾಸಿ ವಿಕ್ರಂ ಬಾಪನಾ ಹಿರಾಚಂದ್‌ ಅವರಿಗೆ ಸೇರಿದ ಕಾರು ಎಂದು ತಿಳಿದು ಬಂದಿದೆ. ಚಾಲಕ ಸೇರಿ ಮೂವರು ಪ್ರಯಾಣಿಸುತ್ತಿದ್ದು ಪ್ರಯಾಣ ಮಾಡುತ್ತಿದ್ದು ಈ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಏಕಾಏಕಿ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದ್ದರಿಂದ ಎಚ್ಚೆತ್ತುಕೊಂಡು ತಕ್ಷಣ ರಸ್ತೆ ಬದಿಗೆ ಕಾರು ನಿಲ್ಲಿಸಿ, ಮೂವರು ಪ್ರಯಾಣಿಕರು

ಸವಣೂರು: ಎರಡು ತಿಂಗಳ ಹಿಂದೆ ಖರೀದಿಸಿದ್ದ ಕಾರು ಬೆಂಕಿಗಾಹುತಿ Read More »

ಭಾರೀ ಮಳೆ ಹಿನ್ನೆಲೆ| ಕೊಡಗಿನ ಈ ಶಾಲೆಗಳಿಗೆ ಎರಡು ದಿನ ರಜೆ

ಸಮಗ್ರ ನ್ಯೂಸ್: ಭಾರೀ ಮಳೆಯ‌ ಪರಿಣಾಮ ಕೊಡಗು‌ ಜಿಲ್ಲೆಯ ಹಲವೆಡೆ ಜನಜೀವನ ಮತ್ತೆ ಅಸ್ತವ್ಯಸ್ಥಗೊಂಡಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಬುಧವಾರ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೊಮ್ಮೆ ಜಲಾವೃತಗೊಂಡಿದೆ. ಭಾಗಮಂಡಲ-ನಾಪೋಕ್ಲು ರಸ್ತೆ ಮೂರನೇ ಬಾರಿ ಜಲಾವೃತಗೊಂಡು ಸಂಪರ್ಕ ಕಡಿತವಾಗಿದೆ. ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿ ಮಡಿಕೇರಿ ತಾಲೂಕಿನ ಬಲಮುರಿ ಕೆಳ ಸೇತುವೆ ಮುಳುಗಡೆಗೊಂಡಿದ್ದು 2 ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಭೂಕುಸಿತದ ಭೀತಿಯಿರುವ ತೋರದ 14 ಕುಟುಂಬದ 34 ಜನರನ್ನು ತೋರ ಕಾಳಜಿ ಕೇಂದ್ರಕ್ಕೆ

ಭಾರೀ ಮಳೆ ಹಿನ್ನೆಲೆ| ಕೊಡಗಿನ ಈ ಶಾಲೆಗಳಿಗೆ ಎರಡು ದಿನ ರಜೆ Read More »

ಹೆಂಡತಿಯನ್ನು ಕೊಂದು ಕಡಾಯಿಯಲ್ಲಿ ಬೇಯಿಸಿದ ಗಂಡ| ಮಕ್ಕಳ ಮುಂದೆಯೇ ನಡೆಯಿತು ಘನಘೋರ ಕೃತ್ಯ!

ಸಮಗ್ರ ನ್ಯೂಸ್: ಮಕ್ಕಳ ಮುಂದೆಯೇ ಪತ್ನಿಯನ್ನು ಕಡಾಯಿಯಲ್ಲಿ ಹಾಕಿ ಬೇಯಿಸಿ ಹತ್ಯೆ ಮಾಡಿರುವ ಭೀಕರ ಕೃತ್ಯವೊಂದು ಪಾಕಿಸ್ತಾನದ ಸಿಂದ್ ಪ್ರಾಂತ್ಯದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಆರು ಮಕ್ಕಳ ಮುಂದೆ ತನ್ನ ಹೆಂಡತಿಯನ್ನು ಕಡಾಯಿಯಲ್ಲಿ ಬೇಯಿಸಿ ಹತ್ಯೆ ಮಾಡಿ ಕ್ರೂರತೆ ಮೆರೆದಿದ್ದಾನೆ. ವರದಿಗಳ ಪ್ರಕಾರ ಘಟನೆಯ ನಂತರ, ಪೊಲೀಸರು ಬುಧವಾರ ನಗರದ ಗುಲ್ಶನ್-ಎ-ಇಕ್ಬಾಲ್ ಪ್ರದೇಶದ ಖಾಸಗಿ ಶಾಲೆಯ ಅಡುಗೆ ಮನೆಯಲ್ಲಿ ಪ್ಯಾನ್‌ನಲ್ಲಿ ಮೃತ ನರ್ಗೀಸ್ ಶವವನ್ನು ಪತ್ತೆ ಹಚ್ಚಿದ್ದಾರೆ. ಈ ಮೃತ ಮಹಿಳೆಯ ಪತಿ ಶಾಲೆಯಲ್ಲಿ ವಾಚ್‌ಮನ್ ಆಗಿ

ಹೆಂಡತಿಯನ್ನು ಕೊಂದು ಕಡಾಯಿಯಲ್ಲಿ ಬೇಯಿಸಿದ ಗಂಡ| ಮಕ್ಕಳ ಮುಂದೆಯೇ ನಡೆಯಿತು ಘನಘೋರ ಕೃತ್ಯ! Read More »

ಸುಳ್ಯ: ಮಳೆಯಿಂದ ಕೊಚ್ಚಿಹೋದ ಉಪ್ಪುಕಳಕ್ಕೆ ಸಚಿವ ಅಂಗಾರ ಭೇಟಿ; ಸೇತುವೆಯ ಭರವಸೆ

ಸಮಗ್ರ ನ್ಯೂಸ್: ಮಳೆಯಿಂದ ಹಾನಿಗೊಳಗಾಗಿದ್ದ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಉಪ್ಪುಕಳ ಗ್ರಾಮಕ್ಕೆ ಬಂದರು ಹಾಗೂ ಮೀನುಗಾರಿಕೆ ಸಚಿವ ಅಂಗಾರ ಇಂದು(ಜು.14) ಭೇಟಿ ನೀಡಿದ್ದು, ಶೀಘ್ರದಲ್ಲೇ ಸೇತುವೆ ನಿರ್ಮಾಣದ ಭರವಸೆ ನೀಡಿದರು. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 124 ಸೇತುವೆಗಳು ನಿರ್ಮಾಣವಾಗಿವೆ. ವಿಶೇಷ ಪ್ರಾಶಸ್ತ್ಯ ನೀಡಿ ಗ್ರಾಮಗಳನ್ನು ಬೆಸೆಯುವ ಸಂಪರ್ಕ ಸೇತುವೆ ನಿರ್ಮಿಸಲಾಗುತ್ತದೆ. ಉಪ್ಪುಕಳದಲ್ಲೂ ಅತೀ ಶೀಘ್ರದಲ್ಲೇ ಸೇತುವೆ ರಚನೆಯಾಗಲಿದ್ದು, ಈ ಭಾಗದ ಜನರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಹೇಳಿದರು. ಮಾಧ್ಯಮಗಳ ಮೇಲೆ ವಾಗ್ದಾಳಿ:ಇದೇ ವೇಳೆ ಸಚಿವ ಅಂಗಾರ

ಸುಳ್ಯ: ಮಳೆಯಿಂದ ಕೊಚ್ಚಿಹೋದ ಉಪ್ಪುಕಳಕ್ಕೆ ಸಚಿವ ಅಂಗಾರ ಭೇಟಿ; ಸೇತುವೆಯ ಭರವಸೆ Read More »