July 2022

ಕಾರವಾರ: ಶಾಲಾ ಕಾಲೇಜುಗಳಿಗೆ ರಜೆ ತಹಶಿಲ್ದಾರರ ವಿವೇಚನೆಗೆ

ಸಮಗ್ರ ನ್ಯೂಸ್: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ‌ ಮುಂದುವರೆಯುತ್ತಿದ್ದರೂ ಶಾಲಾ ಕಾಲೇಜುಗಳು ನಾಳೆಯಿಂದ ಪುನರಾರಂಭಗೊಳ್ಳುತ್ತವೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ. ಆದರೆ ವಿದ್ಯಾರ್ಥಿಗಳ‌‌ ಹಿತದೃಷ್ಟಿಯಿಂದ ಮಳೆಯ ಪರಿಣಾಮ ನೋಡಿಕೊಂಡು ರಜೆ ನೀಡುವ ಅಧಿಕಾರವನ್ನು ಆಯಾ ತಾಲೂಕುಗಳ ತಹಶಿಲ್ದಾರರ ವಿವೇಚನಗೆ ಬಿಡಲಾಗಿದೆ.

ಕಾರವಾರ: ಶಾಲಾ ಕಾಲೇಜುಗಳಿಗೆ ರಜೆ ತಹಶಿಲ್ದಾರರ ವಿವೇಚನೆಗೆ Read More »

ರಾಜ್ಯದಲ್ಲಿ ಮುಂದುವರಿದ ವರ್ಷಧಾರೆ; 14 ಜಿಲ್ಲೆಗಳಿಗೆ ವಿಸ್ತರಿಸಿದ ರೆಡ್ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಭಾರಿ ಮಳೆ ಮುಂದುವರೆದಿದ್ದು, ಹಿನ್ನಲೆಯಲ್ಲಿ ಪ್ರವಾಹದ ಭೀತಿ ಎದುರಾಗಿದ್ದು, ಮುಂದಿನ 48 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ 14 ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ‘ರೆಡ್‌ ಅಲರ್ಟ್‌’ ಘೋಷಿಸಲಾಗಿದೆ. ಇನ್ನು, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಯಾದಗಿರಿ, ವಿಜಯಪುರ, ಕಲಬುರ್ಗಿ, ಹಾವೇರಿ, ಧಾರವಾಡ, ಬೀದರ್‌, ಬೆಳಗಾವಿ

ರಾಜ್ಯದಲ್ಲಿ ಮುಂದುವರಿದ ವರ್ಷಧಾರೆ; 14 ಜಿಲ್ಲೆಗಳಿಗೆ ವಿಸ್ತರಿಸಿದ ರೆಡ್ ಅಲರ್ಟ್ Read More »

ಜಲಪ್ರಳಯ ಭೀತಿ| ಕೊಡಗಿನ ಶಾಲಾ ಕಾಲೇಜುಗಳಿಗೆ ಜು.11ರಂದು ರಜೆ ಘೋಷಿಸಿಲ್ಲ – ಡಿಸಿ ಸ್ಪಷ್ಟನೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆ ಮತ್ತು ಪ್ರವಾಹ ಉಂಟಾಗಿರುವ ಹಿನ್ನೆಲೆಯಲ್ಲಿ ಜುಲೈ 11 ರಂದು‌ ಸೋಮವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ‌ ಎಂಬ ಸಂದೇಶ ಹರಿದಾಡುತ್ತಿದ್ದು, ಇದು ಸುಳ್ಳು ಸುದ್ದಿ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ಹೊರಡಿಸಿದೆ. ಇಂತಹ ಸುದ್ದಿಗಳನ್ನು ಹರಡುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಕಳೆದ ಕೆಲದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಕಾವೇರಿ, ಲಕ್ಷ್ಮಣತೀರ್ಥ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ಜಲಪ್ರಳಯ ಭೀತಿ| ಕೊಡಗಿನ ಶಾಲಾ ಕಾಲೇಜುಗಳಿಗೆ ಜು.11ರಂದು ರಜೆ ಘೋಷಿಸಿಲ್ಲ – ಡಿಸಿ ಸ್ಪಷ್ಟನೆ Read More »

ದ.ಕ ದಲ್ಲಿ ಮುಂದುವರಿದ ವರುಣಾರ್ಭಟ| ಅಂಗನವಾಡಿ, ಪ್ರಾಥಮಿಕ ಪ್ರೌಢ ಶಾಲೆಗಳಿಗೆ ಜು.11ರಂದು ರಜೆ ಘೋಷಣೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 11 ರಂದು‌ ಸೋಮವಾರ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಕಳೆದ ಕೆಲದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ನೇತ್ರಾವತಿ, ಕುಮಾರಧಾರಾ, ಗುರುಪುರ, ಗುಂಡ್ಯ‌ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಹೊರಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

ದ.ಕ ದಲ್ಲಿ ಮುಂದುವರಿದ ವರುಣಾರ್ಭಟ| ಅಂಗನವಾಡಿ, ಪ್ರಾಥಮಿಕ ಪ್ರೌಢ ಶಾಲೆಗಳಿಗೆ ಜು.11ರಂದು ರಜೆ ಘೋಷಣೆ Read More »

ಚಿಕ್ಕಮಗಳೂರು: ನಿಲ್ಲದ ಮಳೆಕಾಟ: ನಾಳೆ, ನಾಡಿದ್ದು ರಜೆ ಘೋಷಣೆ

ಸಮಗ್ರ ನ್ಯೂಸ್: ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನ ಶಾಲಾ-ಕಾಲೇಜುಗಳಿಗೆ ಮತ್ತೆ ಎರಡು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ, ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಕೊಪ್ಪ, ಎನ್.ಆರ್ ಪುರ, ಶೃಂಗೇರಿ ತಾಲೂಕಿನಲ್ಲಿ ಜು.11 ಮತ್ತು 12 ರಂದು ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ ಎನ್‌ ರಮೇಶ್‌ ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರು: ನಿಲ್ಲದ ಮಳೆಕಾಟ: ನಾಳೆ, ನಾಡಿದ್ದು ರಜೆ ಘೋಷಣೆ Read More »

ದ.ಕ ದಲ್ಲಿ ಮಳೆಯ ರೌದ್ರಾವತಾರ; ಕೊಡಗಿನಲ್ಲಿ ಕಂಪಿಸಿದ ಭೂಮಿ| ಮುಂದುವರಿದ ಜಲಪ್ರಳಯ

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆ ಹಾಗು ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಮಳೆ ಅರಣ್ಯದಂಚಿನಲ್ಲಿರುವ ಹಾಗೂ ನದಿ ಪಾತ್ರದಲ್ಲಿರುವ ಕುಟುಂಬಗಳ ಪಾಲಿಗೆ ಭಾರೀ ಸಮಸ್ಯೆಯನ್ನು ತಂದೊಡ್ಡಿದೆ. ಮಳೆಯಿಂದಾಗಿ ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದ ಕುಮಾರಧಾರಾ ಮತ್ತು ನೇತ್ರಾವತಿ ನದಿಯಲ್ಲಿ ನೀರು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು ನದಿ‌ ಪಾತ್ರದ ಜನರ ಸಂಕಷ್ಟಕ್ಕೆ ಕಾರಣವಾಗಿದೆ. ಅದರಲ್ಲೂ ನದಿ ಹಾಗೂ ಹೊಳೆಗಳು ತುಂಬಿ ಹರಿಯುತ್ತಿರುವ ಹಿನ್ನಲೆಯಲ್ಲಿ ಅರಣ್ಯಂಚಿನಲ್ಲಿರುವ ಹಲವು ಗ್ರಾಮಗಳ ಸಂಪರ್ಕವನ್ನೇ ಕಳೆದುಕೊಂಡಿದೆ. ರಾಜ್ಯದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಸಂಪರ್ಕಿಸುವ

ದ.ಕ ದಲ್ಲಿ ಮಳೆಯ ರೌದ್ರಾವತಾರ; ಕೊಡಗಿನಲ್ಲಿ ಕಂಪಿಸಿದ ಭೂಮಿ| ಮುಂದುವರಿದ ಜಲಪ್ರಳಯ Read More »

ಮೇಘಸ್ಫೋಟ ದಲ್ಲಿ ಸುಳ್ಯ ತಾಲೂಕಿನ 11 ಮಂದಿ ಯಾತ್ರಾರ್ಥಿಗಳು ಸೇಫ್

ಹಿಂದೂಗಳ ಪ್ರಸಿದ್ದ  ತೀರ್ಥ ಕ್ಷೇತ್ರ ಜಮ್ಮು ಮತ್ತು ಕಾಶ್ಮೀರದ ಅಮರನಾಥ ಪವಿತ್ರ ಗುಹೆಯ ಬಳಿ ಮೇಘಸ್ಫೋಟ ಸಂಭವಿಸಿದ ಪರಿಣಾಮ ಅನೇಕರು ಸಾವು ನೋವಿನ ನಡುವೆ ಹೋರಾಡಿದ್ದಾರೆ. ಶುಕ್ರವಾರ( ಜು .8)ರ ಸಂಜೆ  5.30 ಸುಮಾರಿಗೆ ಈ ವೇಳೆಗೆ ಇಲ್ಲಿಗೆ ಯಾತ್ರೆ ಕೈಗೊಂಡಿದ್ದ ಸುಳ್ಯ ತಾಲೂಕಿನ 11  ಮಂದಿ ಯಾತ್ರಾರ್ಥಿಗಳು ಸುರಕ್ಷಿತವಾಗಿದ್ದಾರೆ. ದಕ್ಷಿಣ ಕಾಶ್ಮೀರದ ಅಮರನಾಥದ ಪವಿತ್ರ ಗುಹೆ ದೇಗುಲದ ಬಳಿ ಉಂಟಾದ ಹಠಾತ್‌  ಪ್ರವಾಹದಿಂದ ಈ ವರೆಗೆ ಒಟ್ಟು 16 ಮಂದಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಆದರೇ

ಮೇಘಸ್ಫೋಟ ದಲ್ಲಿ ಸುಳ್ಯ ತಾಲೂಕಿನ 11 ಮಂದಿ ಯಾತ್ರಾರ್ಥಿಗಳು ಸೇಫ್ Read More »

ಬಾಹುಬಲಿ ಸಿನಿಮಾ ಬಿಡುಗಡೆಯಾಗಿ ಇಂದಿಗೆ 7 ವರ್ಷ ಕಂಪ್ಲೀಟ್

ರಾಜಮೌಳಿ ನಿರ್ದೇಶನದ ಪ್ರಭಾಸ್ ನಟನೆಯ ಸೂಪರ್ ಡೂಪರ್ ಹಿಟ್ ಸಿನಿಮಾ ‘ಬಾಹುಬಲಿ ದಿ ಬಿಗಿನಿಂಗ್’ ಬಿಡುಗಡೆಯಾಗಿ ಇಂದಿಗೆ 7 ವರ್ಷಗಳನ್ನು ಪೂರೈಸಿದೆ. ಟಾಲಿವುಡ್ ಮಾತ್ರವಲ್ಲದೆ ಇಡೀ ಭಾರತ ಚಿತ್ರರಂಗವೇ ತಿರುಗಿ ನೋಡುವಂತೆ ಮಾಡಿದ ಈ ಚಿತ್ರವನ್ನು ಅರ್ಕ ಮೀಡಿಯಾ ವರ್ಕ್ಸ್ ಬ್ಯಾನರ್ ನಡಿ ಶೋಬು ಯರ್ಲಗಡ್ಡ ಹಾಗೂ ಪ್ರಸಾದ್ ದೇವಿನೇನಿ ನಿರ್ಮಾಣ ಮಾಡಿದ್ದರು, ಎಂ ಎಂ ಕೀರವಾಣಿ ಸಂಗೀತಕ್ಕೆ ಪ್ರೇಕ್ಷಕರು ಫಿದಾ ಆಗಿದ್ದರು. ರಾಜಮೌಳಿ ಕುಟುಂಬದ ಬಹುತೇಕ ಮಂದಿ ಈ ಸಿನಿಮಾದಲ್ಲಿ ಕೆಲಸ ಮಾಡಿದ್ದಾರೆ. ‘ಬಾಹುಬಲಿ ‘

ಬಾಹುಬಲಿ ಸಿನಿಮಾ ಬಿಡುಗಡೆಯಾಗಿ ಇಂದಿಗೆ 7 ವರ್ಷ ಕಂಪ್ಲೀಟ್ Read More »

ಬಕ್ರೀದ್ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ ; ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಈದ್ ಉಲ್ ಅಧಾ ಸಂದರ್ಭದಲ್ಲಿ ಶುಭಾಶಯಗಳನ್ನು ಕೋರಿದರು. ದೇಶದಾದ್ಯಂತ ಭಾನುವಾರ ಈದ್ ಉಲ್ ಅಧಾ (ಬಕ್ರೀದ್) ಆಚರಣೆ ಮಾಡಲಾಗುತ್ತಿದೆ. ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರು  ‘ಈದ್ ಮುಬಾರಕ್! ಈದ್ ಉಲ್ ಅಧಾ ಶುಭಾಶಯಗಳು’ ಎಂದು ನರೇಂದ್ರ ಮೋದಿ ಟ್ವಿಟ್ಟರ್ ಮೂಲಕ ಶುಭಾಶಯ ಕೋರಿದ್ದಾರೆ. ‘ಈ ಹಬ್ಬ ಮಾನವಕುಲದ ಒಳಿತಿಗಾಗಿ ಸಾಮೂಹಿಕ ಯೋಗಕ್ಷೇಮ ಮತ್ತು ಸಮೃದ್ಧಿಯ ಮನೋಭಾವವನ್ನು ಹೆಚ್ಚಿಸಲು ಕೆಲಸ ಮಾಡಲು ನಮಗೆ ಸ್ಫೂರ್ತಿಯಾಗಲಿ” ಎಂದು ಮೋದಿ ಹೇಳಿದ್ದಾರೆ.

ಬಕ್ರೀದ್ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ Read More »

ಕಳ್ಳನೆಂದು ಭಾವಿಸಿ ವ್ಯಕ್ತಿ ಯೊಬ್ಬನ ಬರ್ಬರವಾಗಿ ಹತ್ಯೆಗೈದ ಸೆಕ್ಯೂರಿಟಿ ಗಾರ್ಡ್

ಬೆಂಗಳೂರು: ಸೆಕ್ಯೂರಿಟಿ ಗಾರ್ಡ್ ಒಬ್ಬರು ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆಯೊಂದು ಬೆಂಗಳೂರಿನ ಹೆಚ್ ಎ ಎಲ್ ನಲ್ಲಿ ನಡೆದಿದೆ. ಮಾರತ್ ಹಳ್ಳಿ ಬಳಿಯ ವಂಶಿ ಸಿಟಾಡೆಲ್ ಅಪಾರ್ಟ್ ಮೆಂಟ್ ಗೆ ಅಪರಿಚಿತ ವ್ಯಕ್ತಿಯೊಬ್ಬ ಬಂದಿದ್ದ. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಬಂದ ವ್ಯಕ್ತಿಯನ್ನು ಕಂಡು ಸೆಕ್ಯೂರಿಟಿ ಗಾರ್ಡ್ ಶ್ಯಾಮನಾಥ್ ಆತನನ್ನು ಪ್ರಶ್ನೆ ಮಾಡಿದ್ದಾರೆ. ಎಷ್ಟೇ ಕೇಳಿದರೂ ವ್ಯಕ್ತಿ ಬಾಯಿಬಿಡದೇ ಸುಮ್ಮನಾಗಿದ್ದ. ಬಳಿಕ ಮನೆಯೊಳಗೆ ನುಗ್ಗಲು ಯತ್ನಿಸಿದ್ದ. ಆತ ಕಳ್ಳನೆ ಇರಬೇಕು ಎಂದು ಭಾವಿಸಿ ಪಕ್ಕದಲ್ಲಿಯೇ ಇದ್ದ ರಾಡ್

ಕಳ್ಳನೆಂದು ಭಾವಿಸಿ ವ್ಯಕ್ತಿ ಯೊಬ್ಬನ ಬರ್ಬರವಾಗಿ ಹತ್ಯೆಗೈದ ಸೆಕ್ಯೂರಿಟಿ ಗಾರ್ಡ್ Read More »