July 2022

ಕಾರು ನಿಯಂತ್ರಣ ತಪ್ಪಿ ಮರವಂತೆ ಬೀಚ್ ಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮರವಂತೆ ಬೀಚ್​ನಲ್ಲಿ ಕೆಂಪು ಬಣ್ಣದ ಸ್ವಿಫ್ಟ್​ ಕಾರು ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ರೋಶನ್​ ಆಚಾರ್ಯ ಶವ ಪತ್ತೆಯಾಗಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು ನಿಯಂತ್ರಣ ತಪ್ಪಿದ ಪರಿಣಾಮ ನಾಲ್ವರು ಪ್ರಯಾಣಿಸುತ್ತಿದ್ದ ಸ್ವಿಫ್ಟ್​ ಕಾರು ಮರವಂತೆ ಕಡಲಿಗೆ ಹಾರಿತ್ತು. ಕೋಟೇಶ್ವರ ಮೂಲದ ವಿರಾಜ್​ ಆಚಾರ್ಯ ಸೀಟ್​ ಬೆಲ್ಟ್​ ಧರಿಸಿದ್ದ ಪರಿಣಾಮ ಅವರ ಮೃತದೇಹ ಕಾರಿನಲ್ಲಿಯೇ ಪತ್ತೆಯಾಗಿತ್ತು. ಇದೇ ಕಾರಿನಲ್ಲಿದ್ದ ಕಾರ್ತಿಕ್​ ಹಾಗೂ ಸಂದೀಪ್​ […]

ಕಾರು ನಿಯಂತ್ರಣ ತಪ್ಪಿ ಮರವಂತೆ ಬೀಚ್ ಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ Read More »

ಬಿ.ಸಿ.ರೋಡ್: ಕ್ಷುಲ್ಲಕ ಕಾರಣಕ್ಕೆ ಯುವಕನ ಹತ್ಯೆ

ಸಮಗ್ರ‌ನ್ಯೂಸ್: ಬಿ.ಸಿ.ರೋಡಿನ ಶಾಂತಿ ಅಂಗಡಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ತಂಡಗಳ ನಡುವೆ ನಿನ್ನೆ ತಡರಾತ್ರಿ ಉಂಟಾದ ಮಾತಿನ ಚಕಮಕಿ ಯುವಕನೊಬ್ಬನ ಕೊಲೆಯಲ್ಲಿ ಅಂತ್ಯಗೊಂಡಿದೆ. ಕೊಲೆಯಾದವರನ್ನು ಬಿ.ಸಿ.ರೋಡ್ ಬಂಟ್ವಾಳದ ಬಿ ಮೂಡ ಗ್ರಾಮದ ಶಾಂತಿಯಂಗಡಿ ನಿವಾಸಿ ಅಬ್ದುಲ್ ಖಾದರ್ ಎಂಬವರ ಪುತ್ರ ಆಸೀಫ್‌ಎಂದು ಗುರುತಿಸಲಾಗಿದೆ. ಬಂಟ್ವಾಳದ ಮಾರಿಪಳ್ಳ ನಿವಾಸಿಗಳಾದ ಮಹಮ್ಮದ್ ನೌಫೆಲ್ ಮಾರಿಪಳ್ಳ ಹಾಗೂ ಮಹಮ್ಮದ್ ನೌಸೀರ ಮಾರಿಪಳ್ಳ ಕೊಲೆ ಆರೋಪಿಗಳು. ಬಿ.ಸಿ.ರೋಡಿನ ಬಸ್ ಡಿಪೋ ಬಳಿ ಬೈಕ್ ಹಾರ್ನ್ ವಿಚಾರದಲ್ಲಿ ಎರಡು ತಂಡಗಳ ನಡುವೆ ವಾಗ್ವಾದ ಉಂಟಾಗಿ

ಬಿ.ಸಿ.ರೋಡ್: ಕ್ಷುಲ್ಲಕ ಕಾರಣಕ್ಕೆ ಯುವಕನ ಹತ್ಯೆ Read More »

ಮುಂದುವರಿದ ವರ್ಷಧಾರೆ| ರಾಜ್ಯದಲ್ಲಿ ಇನ್ನೆರಡು ದಿನ ವ್ಯಾಪಕ ಮಳೆ; ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಮುಂದಿನ 2 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕೊಡಗು,ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ 48 ಗಂಟೆ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೊತೆಗೆ ಕರಾವಳಿ

ಮುಂದುವರಿದ ವರ್ಷಧಾರೆ| ರಾಜ್ಯದಲ್ಲಿ ಇನ್ನೆರಡು ದಿನ ವ್ಯಾಪಕ ಮಳೆ; ಅಲರ್ಟ್ ಘೋಷಣೆ Read More »

ಮುಂದುವರಿದ ವರುಣಾರ್ಭಟ| ಉಡುಪಿ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ಜು.5ರಂದು ರಜೆ ಘೋಷಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕುಗಳಿಗೆ ರಜೆ ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ಜುಲೈ 5 ರಂದು ರಜೆ ಘೋಷಣೆ ಮಾಡಿ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್‌ ಆದೇಶ ಹೊರಡಿಸಿದ್ದಾರೆ. ಮುಂದಿನ ಎರಡು ದಿನಗಳ ಕಾಲ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ನಿನ್ನೆಯಷ್ಟೇ ಅಪರ ಜಿಲ್ಲಾಧಿಕಾರಿಗಳು ಅತೀ ಹೆಚ್ಚು ಮಳೆ ಸುರಿಯುತ್ತಿರುವ ಹೆಬ್ರಿ ತಾಲೂಕಿನ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಿದ್ದರು. ಆದರೆ

ಮುಂದುವರಿದ ವರುಣಾರ್ಭಟ| ಉಡುಪಿ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ಜು.5ರಂದು ರಜೆ ಘೋಷಣೆ Read More »

ಬೆಳ್ತಂಗಡಿ: ಸರ್ಕಾರಿ ಬಸ್ ನಲ್ಲಿ ಭಿನ್ನಕೋಮಿನ ಅಪ್ರಾಪ್ತ ಜೋಡಿ| ಕೊಕ್ಕಡದಲ್ಲಿ ಸಿಕ್ಕಿಬಿದ್ದವರು ಧರ್ಮಸ್ಥಳ ಪೊಲೀಸ್ ವಶ

ಸಮಗ್ರ ನ್ಯೂಸ್: ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಸರಕಾರಿ ಬಸ್ಸೊಂದರಲ್ಲಿ ಭಿನ್ನಕೋಮಿನ ಇಬ್ಬರು ಅಪ್ರಾಪ್ತ ಜೋಡಿಯನ್ನು ಸೋಮವಾರ ರಾತ್ರಿ ಕೊಕ್ಕಡದಲ್ಲಿ ಬಸ್ ತಡೆದ ಹಿಂದೂ ಸಂಘಟನೆಯ ಕಾರ್ಯಕರ್ತರು ಪತ್ತೆಹಚ್ಚಿ ಧರ್ಮಸ್ಥಳ ಪೊಲೀಸರ ವಶಕ್ಕೆ ನೀಡಿದ್ದಾರೆ. ಬೆಂಗಳೂರು ಜಿಲ್ಲೆಯ ದೇವನಹಳ್ಳಿಯ ವ್ಯಾಪ್ತಿಯ ಅಪ್ರಾಪ್ತ ಒಂದೇ ಕಾಲೇಜಿನ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿರುವ ಮುಸ್ಲಿಂ ವಿದ್ಯಾರ್ಥಿ ಹಾಗೂ ಹಿಂದೂ ವಿದ್ಯಾರ್ಥಿನಿ ಸೋಮವಾರ ಸಂಜೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬಂದು ರಾತ್ರಿ ವಾಪಸ್ ಬಸ್ ನಲ್ಲಿ ಹೋಗುತ್ತಿದ್ದರು. ಈ ವೇಳೆ ಮಾಹಿತಿ ಪಡೆದ ಹಿಂದೂ ಸಂಘಟನೆಯ

ಬೆಳ್ತಂಗಡಿ: ಸರ್ಕಾರಿ ಬಸ್ ನಲ್ಲಿ ಭಿನ್ನಕೋಮಿನ ಅಪ್ರಾಪ್ತ ಜೋಡಿ| ಕೊಕ್ಕಡದಲ್ಲಿ ಸಿಕ್ಕಿಬಿದ್ದವರು ಧರ್ಮಸ್ಥಳ ಪೊಲೀಸ್ ವಶ Read More »

ಭಾರೀ ಮಳೆ ಹಿನ್ನಲೆ; ದ.ಕ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 5 ರ ಮಂಗಳವಾರ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಾಲೂಕಿನಲ್ಲಿ ಕಳೆದ ರಾತ್ರಿಯಿಂದ ಭಾರಿ ಮಳೆಯಾಗುತ್ತಿದ್ದು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲೆ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಭಾರೀ ಮಳೆ ಹಿನ್ನಲೆ; ದ.ಕ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಸಂಪಾಜೆ ಭೂಕಂಪನ ಪ್ರದೇಶಕ್ಕೆ ಕೇಂದ್ರ ತಂಡ ಪರಿಶೀಲನೆ

ಸಮಗ್ರ ನ್ಯೂಸ್: ಕಳೆದ‌ ಕೆಲವಾರಗಳಿಂದ ಕಂಪಿಸುತ್ತಿರುವ ಸಂಪಾಜೆ ಗ್ರಾಮಕ್ಕೆ ಭೂಕಂಪ ಅಧ್ಯಯನ ತಂಡ ಆಗಮಿಸಿದ್ದು, ಭೂಕಂಪನ ಬಾಧಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದೆ. ಕೇಂದ್ರ ಸರಕಾರದ ಪ್ರಾಕೃತಿಕ ವಿಕೋಪ ಇಲಾಖೆಯ ಮುಖ್ಯಸ್ಥರಾದ ಅಝದ್ ಅಹಮದ್ ಭಟ್, ಸೆಂಥಿಲ್ ,ಮಂಗಳೂರು ವಿಭಾಗದ ಭೂ ಗರ್ಭ ಇಲಾಖೆಯ ಮಹದೇವ್, ತಹಸೀಲ್ದಾರ್ ಅನಿತಾಲಕ್ಷ್ಮಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಅಭಿವೃದ್ಧಿ ಅದಿಕಾರಿ ಸರಿತಾ ಡಿಸೋಜ, ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷರಾದ ಟಿ. ಎಮ್. ಶಾಹಿದ್ ತೆಕ್ಕಿಲ್, ಪಂಚಾಯತ್ ಸದಸ್ಯ ಎಸ್.

ಸಂಪಾಜೆ ಭೂಕಂಪನ ಪ್ರದೇಶಕ್ಕೆ ಕೇಂದ್ರ ತಂಡ ಪರಿಶೀಲನೆ Read More »

ಸುಳ್ಯ; ಬಿರುಕು ಬಿಟ್ಟ ಗುಳಿಕ್ಕಾನ ಪ್ರದೇಶಕ್ಕೆ ಭೇಟಿ ನೀಡಿದ ತಜ್ಞರ ತಂಡ

ಸಮಗ್ರ ನ್ಯೂಸ್ : ಬಿರುಕು ಬಿಟ್ಟು ಜನರ ಆತಂಕಕ್ಕೆ ಕಾರಣವಾದ ಸುಳ್ಯದ ಗುಳಿಕ್ಕಾನ ಪ್ರದೇಶಕ್ಕೆ ತಜ್ಞರ ತಂಡ ಭೇಟಿ ನೀಡಿದ್ದು, 2018 ರಲ್ಲಿ ಗುಳಿಕ್ಕಾನದ ಗುಡ್ಡದಲ್ಲಿ 200 ಮೀಟರ್ ದೂರದವರೆಗೆ ಭೂಮಿ ಆಳವಾಗಿ ಭಾಗ ಬಿಟ್ಟಿತು. ಈ ವೇಳೆ ಗುಳಿಕ್ಕಾನದ ಗುಡ್ಡ ಭಾಗದಲ್ಲಿ 10 ಕುಟುಂಬಗಳು ವಾಸಿಸುತ್ತಿದ್ದವು. ಇದೀಗ ಈ ಗುಡ್ಡ ಪ್ರದೇಶದಲ್ಲಿ ಜನ ವಾಸ ಮಾಡಲು ಸೂಕ್ತವಾಗಿದೆಯೇ ಎಂಬುದನ್ನು ಪರಿಶೀಲನೆ ನಡೆಸುವುದಕ್ಕೆ ತಂಡ ಆಗಮಿಸಿದೆ. ಸುಳ್ಯದ ಗುಳಿಕ್ಕಾನ ಪ್ರದೇಶ ಜನ ವಾಸಿಸಲು ಯೊಗ್ಯವಾಗಿದೆಯೇ ಎಂದು ತಿಳಿಯಲು

ಸುಳ್ಯ; ಬಿರುಕು ಬಿಟ್ಟ ಗುಳಿಕ್ಕಾನ ಪ್ರದೇಶಕ್ಕೆ ಭೇಟಿ ನೀಡಿದ ತಜ್ಞರ ತಂಡ Read More »

ಸ್ಕೂಟಿಗಳ ನಡುವೆ ಅಪಘಾತ; ಸುಳ್ಯದ ಪತ್ರಕರ್ತ ಕುಟುಂಬ ಸಣ್ಣ ಪುಟ್ಟ ಗಾಯಗಳಿಂದ ಪಾರು

ಸಮಗ್ರ ನ್ಯೂಸ್ : ಸುಳ್ಯದ ಜಟ್ಟಿಪಳ್ಳ ರಸ್ತೆಯಿಂದ ಮುಖ್ಯ ರಸ್ತೆಗೆ ಬರುವಲ್ಲಿ ಇಂದು ಬೆಳಗ್ಗೆ ಎರಡು ಸ್ಕೂಟಿಗಳ ನಡುವೆ ಅಪಘಾತ ಸಂಭವಿಸಿದೆ. ಸುಳ್ಯದ ಸುದ್ದಿ ಬಿಡುಗಡೆ ಪತ್ರಕರ್ತರಾಗಿರುವ ಶರೀಫ್ ಜಟ್ಟಿಪಳ್ಳ ಹಾಗೂ ಅವರ ಪತ್ನಿ, ಮಗು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪತ್ರಕರ್ತ ಶರೀಫ್ ಅವರ ಪತ್ನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂಬ ಮಾಹಿತಿ ದೊರಕಿದ್ದು, ಈ ವಿಷಯದ ಬಗ್ಗೆ ಪೊಲೀಸ್ ಕೇಸ್ ದಾಖಲಾಗಿದೆ. ಭೀಕರ ಅಪಘಾತದ ದೃಶ್ಯ ಸಿಸಿ ಕ್ಯಾಮರಾ ದಲ್ಲಿ ಸೆರೆಯಾಗಿದ್ದು, ಇದೀಗ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ

ಸ್ಕೂಟಿಗಳ ನಡುವೆ ಅಪಘಾತ; ಸುಳ್ಯದ ಪತ್ರಕರ್ತ ಕುಟುಂಬ ಸಣ್ಣ ಪುಟ್ಟ ಗಾಯಗಳಿಂದ ಪಾರು Read More »

ಪಿಎಸ್ಐ ನೇಮಕಾತಿ ಹಗರಣ| ಎಡಿಜಿಪಿ ಅಮೃತ್ ಪಾಲ್ ಬಂಧನ

ಸಮಗ್ರ ನ್ಯೂಸ್: ಪಿಎಸ್ಐ ನೇಮಕಾತಿ ಹಗರಣದಲ್ಲಿ ವಿಚಾರಣೆ ಎದುರಿಸುತ್ತಿದ್ದ ಎಡಿಜಿಪಿ ಅಮೃತ್ ಪಾಲ್ ಅವರನ್ನು ಇಂದು ಸಿಐಡಿ ಅಧಿಕಾರಿಗಳು ಬಂಧಿಸಿದ್ದು, ADGP ರ್ಯಾಂಕ್‌ನ ಅಧಿಕಾರಿಯೋರ್ವರ ಬಂಧನ ರಾಜ್ಯದ ಇತಿಹಾಸದಲ್ಲೇ ಮೊದಲ ಪ್ರಕರಣ ವಾಗಿದೆ. ಅಮೃತ್ ಪಾಲ್ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದರು. ಇತ್ತೀಚೆಗೆ ನಡೆದ ಪಿಎಸ್ಸೆ ನೇಮಕಾತಿ ಅಕ್ರಮಕ್ಕೆ ಅಮೃತ್ ಪಾಲ್ ಕೂಡಾ ಸಾಥ್ ನೀಡಿದ್ದಾರೆ. ಎಂಬ ಆರೋಪವಿತ್ತು. ಈ ಹಿನ್ನೆಲೆಯಲ್ಲಿ ನಾಲ್ಕು ಬಾರಿ ಅವರನ್ನು ಸಿಐಡಿ ಪೊಲೀಸರು ವಿಚಾರಣೆಗೆ ಕರೆದಿದ್ದರು. ನಾಲ್ಕನೇ ಬಾರಿ ವಿಚಾರಣೆಗೆ

ಪಿಎಸ್ಐ ನೇಮಕಾತಿ ಹಗರಣ| ಎಡಿಜಿಪಿ ಅಮೃತ್ ಪಾಲ್ ಬಂಧನ Read More »