ಭಾರೀ ಮಳೆ: ಕುಕ್ಕೆ ಸುಬ್ರಹ್ಮಣ್ಯ ಬಳಿ ಗುಡ್ಡ ಕುಸಿದು ಮಕ್ಕಳು ಸಾವು!? ಮುಂದುವರಿದ ರಕ್ಷಣಾ ಕಾರ್ಯ…

ಸಮಗ್ರ ನ್ಯೂಸ್: ಭಾರೀ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಬಳಿಯಲ್ಲಿ ಗುಡ್ಡ ಜರಿದು ಮನೆಯೊಂದು ಕುಸಿದು ಬಿದ್ದಿದ್ದು ಮನೆಯೊಳಗಿನ ಇಬ್ಬರು ಮಕ್ಕಳು ಮಣ್ಣಲ್ಲಿ ಹೂತು ಹೋಗಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

Ad Widget ... ..

ಕುಮಾರದಾರ ಬಳಿಯ ಕುಸುಮಾಧರ ಎಂಬವರ ಮನೆ ಕುಸಿತಗೊಂಡಿದ್ದು ಅವರ ಇಬ್ಬರು ಹೆಣ್ಣುಮಕ್ಕಳು ಮಣ್ಣು ಪಾಲಾಗಿದ್ದಾರೆ. ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಜೇಸಿಬಿ ತರಿಸಲಾಗಿದ್ದು ರಕ್ಷಣಾ ಕಾರ್ಯ ಸಾಗುತ್ತಿದೆ.

Ad Widget

ಆದರೆ ಕುಮಾರಧಾರಾದಿಂದ ಪಂಜ ಕಡೆಗೆ ಹೋಗುವ ರಸ್ತೆ ನೆರೆ ನೀರಲ್ಲಿ ಪೂರ್ಣ ಮುಳುಗಿರುವುದರಿಂದ ಮತ್ತು ಮರ ಕೂಡ ಬಿದ್ದಿರುವುದರಿಂದ ರಸ್ತೆ ಬಂದ್ ಆಗಿದ್ದು ಪರಿಹಾರ ಕಾರ್ಯಕ್ಕೆ ತೊಂದರೆ ಉಂಟಾಗಿದೆ.

Leave a Comment

Your email address will not be published. Required fields are marked *