Ad Widget .

ಸುರತ್ಕಲ್: ಫಾಝಿಲ್ ಹಂತಕರು ಖಾಕಿ ಬಲೆಗೆ|6 ಮಂದಿ ಆರೋಪಿಗಳು ಅಂದರ್| ಕೊಲೆಯ ಹಿಂದಿದೆ ರೋಚಕ ಕಹಾನಿ

ಸಮಗ್ರ ನ್ಯೂಸ್: ಸುರತ್ಕಲ್‌ ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣವನ್ನು ಕೊನೆಗೂ ಭೇದಿಸಿದ ಮಂಗಳೂರು ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಮತ್ತಷ್ಟು ಜನರ ಹತ್ಯೆಗೆ ಪಟ್ಟಿ ಸಿದ್ಧಪಡಿಸಿದ್ದರು ಎಂಬ ಆಘಾತಕಾರಿ ವಿಷಯ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಅಜಿತ್(31) ಸುಹಾಸ್ ಶೆಟ್ಟಿ (29) ಮಹೋನ್ (26) ಗಿರಿಧರ್ (23) ಅಭಿಷೇಕ್ (21) ಶ್ರೀನಿವಾಸ್ (23) ದೀಕ್ಷಿತ್ (21) ಬಂಧಿತ ಆರೋಪಿಗಳು . ಪ್ರಕರಣದಲ್ಲಿ ಮತ್ತಷ್ಟು ಜನರು ಭಾಗಿಯಾಗಿದ್ದು ಅವರ ಬಂಧನಕ್ಕೆ ಬಲೆ ಬೀಸಲಾಗಿದೆ.

Ad Widget . Ad Widget .

ಬಂಧಿತರೆಲ್ಲರೂ ಅಪರಾಧ ಹಿನ್ನೆಲೆಯುಳ್ಳವರಾಗಿದ್ದು, ಉದ್ಯಾವರದಲ್ಲಿ ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Ad Widget . Ad Widget .

ಸುರತ್ಕಲ್​ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣ ಸಂಬಂಧ ಇಂದು ಬೆಳ್ಳಂಬೆಳಗ್ಗೆ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಧ್ಯರಾತ್ರಿ ಆರೋಪಿಗಳ ಖಚಿತ ಮಾಹಿತಿ ಪಡೆದ ತನಿಖಾ ತಂಡವು ಕಾರ್ಯಾಚರಣೆ ನಡೆಸಿ ಉದ್ಯಾವರದಲ್ಲಿ ಆರು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಹತ್ಯೆ ಬಗ್ಗೆ ಇಂಚಿಂಚು ಮಾಹಿತಿಯನ್ನು ಹೊರಹಾಕಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ವಿವರ ನೀಡಿದ್ದು, ಬಜ್ಪೆ ನಿವಾಸಿ ಸುಹಾಸ್ ವಿರುದ್ಧ ಬಜ್ಪೆ ಮತ್ತು ಬೆಳ್ತಂಗಡಿಯಲ್ಲಿ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, 2010ರಲ್ಲಿ ನಡೆದ ಕೊಲೆ ಪ್ರಕರಣದಲ್ಲೂ ಭಾಗಿಯಾಗಿದ್ದಾನೆ.

ಮೋಹನ್ ವಿರುದ್ಧ ಸುರತ್ಕಲ್ ಮತ್ತು ಕಾವೂರಿನಲ್ಲಿ ಎರಡು ಪ್ರಕರಣಗಳು, ಸುರತ್ಕಲ್ ನಿವಾಸಿ ಗಿರಿಧರ್ ವಿರುದ್ಧ 2 ಪ್ರಕರಣಗಳು, ಕಾಟಿಪಳ್ಳ ನಿವಾಸಿ ಅಭಿಷೇಕ್ ವಿರುದ್ಧ ಸುರತ್ಕಲ್​ನಲ್ಲಿ 2 ಪ್ರಕರಣಗಳು, ಕಾಟಿಪಳ್ಳದ ನಿವಾಸಿ ಶ್ರೀನಿವಾಸ್ ವಿರುದ್ಧ ಉರ್ವ ಪೊಲೀಸ್ ಠಾಣೆಯಲ್ಲಿ 1 ಸುರತ್ಕಲ್​ನಲ್ಲಿ 3 ಪ್ರಕಣಗಳು ಹಾಗೂ ದೀಕ್ಷಿತ್ ವಿರುದ್ಧ 3 ಪಕ್ರರಣಗಳು ದಾಖಲಾಗಿವೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಆರೋಪಿ ಸುಹಾಸ್ ಅಭಿಷೇಕ್​ನೊಂದಿಗೆ ದೂರವಾಣಿ ಕರೆ ಮೂಲಕ ಮಾತನಾಡಿ ಓರ್ವನನ್ನು ಹತ್ಯೆ ಮಾಡುವ ಬಗ್ಗೆ ಮಾತನಾಡುತ್ತಾನೆ. ಜು.27ರಂದು ಸುರತ್ಕಲ್​ನ ಒಂದು ಕಡೆಯಲ್ಲಿ ಅಭಿಷೇಕ್ ಸುಹಾಸ್ ಉಳಿದವರನ್ನು ಸೇರಿಸಿಕೊಂಡು ಮಾತುಕತೆ ನಡೆಸಿ ಕೃತ್ಯಕ್ಕೆ ಕಾರಿನ ಅವಶ್ಯಕತೆ ಬಗ್ಗೆ ಹೇಳಿಕೊಂಡಿದ್ದಾರೆ. ಅದರಂತೆ ಮೋಹನ್ ಮತ್ತು ಗಿರಿಧರ್ ಮಧ್ಯಾಹ್ನದ ವೇಳೆಗೆ ಅಜಿತ್ ಕ್ರಾಸ್ತಾ ಅವರ ಕಾರನ್ನು 15 ಸಾವಿರ ರೂಪಾಯಿಗೆ ಡೀಲ್ ಮಾಡಿ ತರುತ್ತಾರೆ.

ಹತ್ಯೆ ಸಂಚಿನಂತೆ ಜು.27ರಂದು ಸಂಜೆ ಸುಹಾಸ್ ಗಿರಿಧರ್ ಮೋಹನ್ ಚರ್ಚೆ ನಡೆಸಿ ತಮಗೆ ಆಗದವರ ಹೆಸರಿನ ಪಟ್ಟಿ ತಯಾರಿಸುತ್ತಾರೆ. 28ರ ಬೆಳಗ್ಗೆ ಸುಹಾಸ್ ಮಾರಕಾಸ್ತ್ರಗಳನ್ನು ಸಿದ್ಧಪಡಿಸುತ್ತಾನೆ. ಅಂದು ಮತ್ತೆ ಚರ್ಚೆ ನಡೆಸಿದಾಗ ಹತ್ಯೆಗೆ ಫಾಜಿಲ್ ಹೆಸರನ್ನು ಫೈನಲ್ ಮಾಡುತ್ತಾರೆ. ನಂತರ ಫಾಜಿಲ್​ನ ಚಲನವಲನಗಳ ಮೇಲೆ ಆರೋಪಿಗಳು ನಿಗಾ ಇಡಲು ಆರಂಭಿಸಿದ್ದಾರೆ.

ಅಂದು ಸಂಜೆ ಆರು ಜನರು ಕಾರಿನಲ್ಲಿ ಬಂದು ಫಾಜಿಲ್​ ಬರುವಿಕೆಗಾಗಿ ಕಾಯುತ್ತಿರುತ್ತಾರೆ. ಸರಿಯಾದ ಸ್ಥಳದಲ್ಲಿ ಫಾಜಿಲ್ ಕಣ್ಣಿಗೆ ಬೀಳುತ್ತಿದ್ದಂತೆ ಸುಹಾಸ್, ಮೋಹನ್, ಅಭೀಷೇಕ್ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಚ್ಚಿ ಪರಾರಿಯಾಗಿದ್ದಾರೆ. ಕೃತ್ಯದ ವೇಳೆ ಗಿರಿಧರ್ ಕಾರು ಚಾಲಕನಾಗಿದ್ದನು, ದೀಕ್ಷಿತ್ ಕಾರಿನಲ್ಲೇ ಕುಳಿತಿದ್ದನು, ಶ್ರೀನಿವಾಸ್ ಕೃತ್ಯ ನಡೆಸಿ ಪರಾರಿಯಾಗುವ ಸಂದರ್ಭದಲ್ಲಿ ಯಾರು ಕೂಡ ಅಡ್ಡಿ ಬರುಬಾರದೆಂದು ಕಾರಿನ ಬಳಿ ನಿಲ್ಲುತ್ತಾನೆ.

ಕೃತ್ಯ ನಡೆಸಿದ ಬಳಿಕ ಕಾರಿನಲ್ಲೇ ಪರಾರಿಯಾದ ಆರೋಪಿಗಳು, ಕಾರ್ಕಳಕ್ಕೆ ಹೋಗಿದ್ದಾರೆ. ಅಲ್ಲಿ ನಿರ್ಜನ ಪ್ರದೇಶದಲ್ಲಿ ಕಾರನ್ನು ನಿಲ್ಲಿಸಿ ಬೇರೊಂದು ಕಾರಿನಲ್ಲಿ ಓಡಾಟ ನಡೆಸಲು ಪ್ರಾರಂಭಿಸಿದ್ದಾರೆ. ಅದಾಗ್ಯೂ ಬೇರೆಬೇರೆ ಕಡೆಗಳಲ್ಲಿ ಆರೋಪಿಗಳು ನೆಲೆಸಲು ಯತ್ನಿಸಿದರೂ ಸಾಧ್ಯವಾಗಿಲ್ಲ. ಈ ನಡುವೆ ಇಂದು ಬೆಳಗ್ಗೆ 2 ಗಂಟೆ ಸುಮಾರಿಗೆ ಪೊಲೀಸರಿಗೆ ಹಂತಕರ ಸುಳಿವು ಸಿಗುತ್ತದೆ. ಅದರಂತೆ ಕಾರ್ಯಾಚರಣೆಗಿಳಿದ ಪೊಲೀಸರು ಉದ್ಯಾವರದಲ್ಲಿ ಬೆಳಗ್ಗೆ 5.30ರ ಸುಮಾರಿಗೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಕೃತ್ಯ ಎಸಗಿದ ಬಗ್ಗೆ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಹೀಗಾಗಿ ಆರು ಮಂದಿಯನ್ನು ಕೂಡ ಬಂಧಿಸಲಾಗಿದೆ.

Leave a Comment

Your email address will not be published. Required fields are marked *