ಬಾಗಲಕೋಟೆ : ದಾವಣಗೆರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜನ್ಮದಿನದ ನಿಮಿತ್ತ ನಡೆಯಲಿರುವ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಜಿಲ್ಲೆಯ ಕಾರ್ಯಕರ್ತರ ವಾಹನ ಅಪಘಾತಕ್ಕೆ ಈಡಾಗಿದ್ದು, ವಾಹನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುಮಾರು ನಾಲ್ವರು ಗಾಯಗೊಂಡಿದ್ದಾರೆ.
ಮೃತಪಟ್ಟ ವ್ಯಕ್ತಿಯನ್ನು ಮುಧೋಳ ತಾಲೂಕಿನ ಆಲಗುಂಡಿ ಗ್ರಾಮದ, ಕ್ರೂಸರ್ ವಾಹನ ಚಾಲಕ ಪ್ರಕಾಶ ಬಡಿಗೇರ ಎಂದು ಗುರುತಿಸಲಾಗಿದ್ದು, ಗಾಯಗೊಂಡ ವ್ಯಕ್ತಿಗಳನ್ನು ಬಾಗಲಕೋಟೆಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಲಗುಂಡಿ ಗ್ರಾಮದ ಸುಮಾರು 15ಕ್ಕೂ ಹೆಚ್ಚು ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ಅವರ ಅಭಿಮಾನಿಗಳು ಕ್ರೂಸರ್ ವಾಹನದ ಮೂಲಕ ದಾವಣಗೆರೆಗೆ ತೆರಳುತ್ತಿದ್ದರು.
ಈ ವೇಳೆ ಬಾದಾಮಿ ತಾಲೂಕಿನ ಕೆರೂರ ಸಮೀಪದ ಹೂಲಗೇರಿ ಬಳಿ ವಾಹನ ಅಪಘಾತಕ್ಕೆ ಈಡಾಗಿದ್ದು, ಘಟನೆಯಲ್ಲಿ ಆಲಗುಂಡಿಯ ವಾಹನ ಚಾಲಕ ಪ್ರಕಾಶ ಬಡಿಗೇರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಘಟನೆಯಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆರೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.