ಸಮಗ್ರ ನ್ಯೂಸ್: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಅಲ್ಲದೇ ಮುಂದಿನ ನಾಲ್ಕು ದಿನಗಳ ಧಾರಾಕಾರವಾಗಿ ಮಳೆ ಸುರಿಯುವ ಸಾಧ್ಯತೆಯ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಚಾಮರಾಜನಗರ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಚಾಮರಾಜನಗರ ಜಿಲ್ಲೆಯ ಶಾಲೆಗಳಿಗೆ (ಆ.5 ಮತ್ತು 6 ರಂದು) 2 ದಿನಗಳ ಕಾಲ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದಾರೆ. ಕಳೆದ ಎರಡು ಮೂರು ದಿನಗಳಿಂದ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನಾಳೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ನಾಳೆ ಮತ್ತು ನಾಳೆ (ಆ.5 ಮತ್ತು 6) ಚಾಮರಾಜನಗರ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಗಳಿಗೆ ರಜೆ ಘೋಷಿಸಲಾಗಿದೆ.
ಮಂಡ್ಯ ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಆ.5ರಂದು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದೆ.
ಜಿಲ್ಲೆಯಲ್ಲಿ ರಣಭೀಕರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಆ.5ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಎಸ್.ಅಶ್ವಥಿ ಆದೇಶ ಹೊರಡಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆಯು 20 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮುನ್ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಮುಂದಿನ 3 ಗಂಟೆಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗಾಳಿ, ಗುಡುಗು, ಮಿಂಚು, ಮಿಂಚು ಸಹಿತ ಮಳೆಯಾಗಲಿದೆ. ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಿದೆ. ಅತಿವೃಷ್ಟಿಯಿಂದ ಆಗುವ ಅನಾಹುತಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ 20 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.