ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್| ಆ.4 ಮತ್ತು 5ಕ್ಕೆ ಭಾರೀ ಮಳೆ ಸಂಭವ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಳೆ ಬಿರುಸು ಪಡೆದಿದ್ದು, ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget ... ..

ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಇಂದು ಮತ್ತು ನಾಳೆ ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.

Ad Widget

ಮೈಸೂರು, ಶಿವಮೊಗ್ಗ, ಹಾಸನ, ತುಮಕೂರು, ಹಾವೇರಿ, ಬೆಳಗಾವಿ, ಗದಗ, ಧಾರವಾಡ, ವಿಜಯಪುರ, ಕಲಬುರಗಿ ಮತ್ತು ಬೀದರ್ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಗುರುವಾರ ಶುಕ್ರವಾರ ಬೆಳಗಾವಿ, ಬಾಗಲಕೋಟೆ, ಮೈಸೂರು, ಚಾಮರಾಜನಗರ, ತುಮಕೂರು ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಈ ನಡುವೆ ವಿಪರೀತ ಮಳೆಯ ಕಾರಣ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಉಳಿದೆಡೆ ಪರಿಸ್ಥಿತಿ ನೋಡಿಕೊಂಡು ರಜೆ ನಿರ್ಧರಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

Leave a Comment

Your email address will not be published. Required fields are marked *