Ad Widget .

ಮಂಗಳೂರು: ನಾಳೆಯಿಂದ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರಿಗಿಲ್ಲ ಅವಕಾಶ- ಎಡಿಜಿಪಿ

ಸಮಗ್ರ ನ್ಯೂಸ್: ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶವಿಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರಿನಲ್ಲಿ ತಿಳಿಸಿದ್ದಾರೆ.

Ad Widget . Ad Widget .

ಹದಿನೆಂಟು ವರ್ಷದ ಕೆಳಗಿನ ಮಕ್ಕಳು, ಹಿರಿಯ ನಾಗರಿಕರು ಮತ್ತು ಮಹಿಳೆಯರಿಗೆ ಈ ನಿಯಮದಿಂದ ರಿಯಾಯಿತಿ ನೀಡಲಾಗಿದೆ. ಕೇವಲ ಪುರುಷ ಹಿಂಬದಿ ಸವಾರರಿಗೆ ಮಾತ್ರ ಈ ನಿಯಮ ಅನ್ವಯಿಸಲಿದೆ. ಮುಂದಿನ ಒಂದು ವಾರದ ಮಟ್ಟಿಗೆ ಜಿಲ್ಲೆಯಲ್ಲಿ ಈ ನಿಯಮವನ್ನು ಪಾಲನೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಕೆಲವು ಬಾರಿ ಹಿಂಬದಿ ಸವಾರರು ಸಮಸ್ಯೆಯನ್ನು ಉಂಟು ಮಾಡ್ತಾರೆ. ಬೇರೆ ರಾಜ್ಯದಲ್ಲೂ ಈ ನಿಯಮ ಜಾರಿಗೆ ತಂದು, ಎಲ್ಲಾ ಪುರುಷ ಹಿಂಬದಿ ಸವಾರರಿಗೆ ದ್ವಿಚಕ್ರ ವಾಹನದಲ್ಲಿ ಸಂಚರಿಸಲು ಅವಕಾಶ ನಿರಾಕರಿಸಲಾಗಿತ್ತು. ಇಲ್ಲಿ ಮಹಿಳೆಯರು, ಹಿರಿಯ ನಾಗರಿಕರು,ಮಕ್ಕಳಿಗೆ ರಿಯಾಯಿತಿ ನೀಡಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಎರಡು ವಾರಗಳ ಅಂತರದಲ್ಲಿ ಜಿಲ್ಲೆಯಲ್ಲಿ ಮೂರು ಯುವಕರ ಹತ್ಯೆಯಾಗಿದ್ದು, ಆ ಬಳಿಕ ಇಲ್ಲಿನ ಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ಇದನ್ನು ನಿಯಂತ್ರಿಸಲು ಜಿಲ್ಲೆಯಲ್ಲಿ ನೈಟ್‌ ಕರ್ಫ್ಯೂ ಜಾರಿಗೊಳಿಸಲಾಗಿದೆ. ಜಿಲ್ಲೆಯಲ್ಲಿ ಎಲ್ಲಾ ಅಂಗಡಿ ಮುಂಗಟ್ಟು, ವಾಣಿಜ್ಯ ವ್ಯವಹಾರಗಳನ್ನು ಸಂಜೆ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಮುಚ್ಚುವಂತೆ ಸೂಚಿಸಲಾಗಿದೆ. ಅಲ್ಲದೆ ಕಳೆದ 10 ದಿನದಿಂದ ಮಧ್ಯ ಮಾರಾಟಕ್ಕೂ ಜಿಲ್ಲೆಯಲ್ಲಿ ನಿಷೇಧ ಹೇರಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *