ಸಮಗ್ರ ನ್ಯೂಸ್: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿಯನ್ನು ನೀಡಿದ್ದು, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಖಡಕ್ ಸೂಚನೆಯನ್ನು ನೀಡಿದ್ದಾರೆ. ಪಕ್ಷದಲ್ಲಿನ ಸಚಿವರನ್ನು, ಶಾಸಕರನ್ನು , ಮತ್ತು ಪದಾಧಿಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಮೂರು ಕೊಲೆಗಳು ಆಗಿವೆ. ಇದರಿಂದಾಗಿ ಪಕ್ಷದ ಇಮೇಜ್‌ಗೆ ಡ್ಯಾಮೇಜ್ ಆಗುತ್ತಿದೆ. ಮಸೂದ್ , ಪ್ರವೀಣ್, ಫಾಜಿಲ್ ಕೊಲೆಗಳ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ ಆರೋಪಿಗಳನ್ನು ಶ್ರೀಘ್ರದಲ್ಲಿಯೇ ಬಂಧಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಅಮಿತ್ ಶಾ ಸೂಚನೆಯನ್ನು ನೀಡಿದ್ದಾರೆ. ಯಾವುದೇ ಜಾತಿ , ಧರ್ಮದ ಭೇದವಿಲ್ಲದೇ ಆರೋಪಿಗಳನ್ನು ಶೀಘ್ರವೇ ಬಂಧಿಸಿ ಜೈಲಿಗೆ ಕಳುಹಿಸಿ ಎಂದಿದ್ದಾರೆ.
ಬಿಜೆಪಿ ಪಕ್ಷ ಪದಾಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದ
ಅಮಿತ್ ಶಾ ಕೊಲೆಗಳ ವಿಚಾರದಲ್ಲಿ ಪಕ್ಷದ ಪದಾಧಿಕಾರಿಗಳೇ ಬೀದಿಗಳಿದು ಪ್ರತಿಭಟನೆಯನ್ನು ನಡೆಸಿದ್ದಕ್ಕೆ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ನಮ್ಮ ಪಕ್ಷ ಕೇಡರ್ ಬೇಸ್ ಪಕ್ಷವಾಗಿದ್ದು, ಶಾಸಕರು ಸಚಿವರನ್ನು ಮಾತ್ರವಲ್ಲದೇ ಪದಾಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸವನ್ನು ಮಾಡುವಂತೆ ಮುಖ್ಯಮಂತ್ರಿಗೆ ಹೇಳಿದ್ದಾರೆ ಎಂದು ತಿಳಿದುಬಂದಿದೆ.