ಚಲಿಸುತ್ತಿದ್ದ ಸಾರಿಗೆ ಬಸ್ ನಿಂದ ಬಿದ್ದು ಮಹಿಳೆ ಸಾವು

ಬಳ್ಳಾರಿ: ಚಲಿಸುತ್ತಿದ್ದ ಸಾರಿಗೆ ಬಸ್‌ನಿಂದ ಬಿದ್ದು ಮಹಿಳೆ ಸಾವನಪ್ಪಿದ ಘಟನೆಯೊಂದು ತಾಲೂಕಿನ ವೇಣಿ ವೀರಾಪುರದ ಹೆದ್ದಾರಿಯಲ್ಲಿ ನಡೆದಿದೆ.

Ad Widget ... ..

ಮೃತರ ಗುರುತು ಪತ್ತೆಯಾಗಿಲ್ಲ. ಮಹಿಳೆ ಬಾಗಿಲು ಬಳಿ ನಿಂತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ದುರಂತ ಸಂಭವಿಸಿದೆ ಎನ್ನಲಾಗಿದೆ.

Ad Widget

ಬಳ್ಳಾರಿಯಿಂದ ಹೊಸಪೇಟೆಗೆ ತೆರಳುತ್ತಿದ್ದ KA 34, F-1228 ನಂಬರ್‌ನ ಸಾರಿಗೆ ಬಸ್​​ನಲ್ಲಿ ಮಹಿಳೆ ಪ್ರಯಾಣಿಸುತ್ತಿದ್ದರು.

ಬಸ್ ಚಲಿಸುತ್ತಿರುವಾಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕುಡುತಿನಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *