Ad Widget .

ಆಗಸ್ಟ್‌ 7 ರಂದು ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ ಗೆ ಪರೀಕ್ಷೆ ಪ್ರಾರಂಭ

ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿನ ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗೆ ಆಗಸ್ಟ್ 7 ರಂದು ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಹತ್ವದ ಮಾಹಿತಿ ನೀಡಿದೆ.

Ad Widget . Ad Widget .

ಕೆಪಿಟಿಸಿಎಲ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗೆ ಆಗಸ್ಟ್ 7 ರಂದು ಪರೀಕ್ಷೆ ನಡೆಯಲಿದೆ.

Ad Widget . Ad Widget .

ಪಿಎಸ್ ಐ ನೇಮಕಾತಿ ಪರೀಕ್ಷೆ ವೇಳೆ ಅಕ್ರಮದ ನಂತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರತಿ ಪರೀಕ್ಷೆಗಳನ್ನು ಕಟ್ಟುನಿಟ್ಟಾಗಿ ನಡೆಸುತ್ತಿದ್ದು, ಕೆಪಿಟಿಸಿಎಲ್ ಪರೀಕ್ಷೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ನಡೆಸಲು ಮುಂಜಾಗ್ರತಾ ಕ್ರಮ ಕೈಗೊಂಡಿದೆ.

ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗೆ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಈ ನಿಯಮಗಳ ಪಾಲನೆ ಕಡ್ಡಾಯವಾಗಿದ್ದು, ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ವಾಚ್, ಮೊಬೈಲ್ ಸೇರಿ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳು, ಆಭರಣ, ಶೂ, ಧರಿಸಿ ಬರುವುದನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿಷೇಧಿಸಿದೆ.

Leave a Comment

Your email address will not be published. Required fields are marked *