ಚಿಕ್ಕಮಗಳೂರು: ಭಾರೀ ಮಳೆ; ಮನೆಗಳಿಗೆ ನುಗ್ಗಿದ ನೆರೆ ನೀರು

ಸಮಗ್ರ ನ್ಯೂಸ್: ಕಾಫಿನಾಡು ಚಿಕ್ಕಮಗಳೂರಲ್ಲಿ ಭಾರಿ ಮಳೆ‌ ಸುರಿಯುತ್ತಿದ್ದು, ಹಲವೆಡೆ ಮನೆಗಳಿಗೆ‌ ನೆರೆನೀರು ನುಗ್ಗಿದೆ.

Ad Widget ... ..

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ನಿಡುವಳ್ಳಿ ಗ್ರಾಮದಲ್ಲಿ
ಸುಮಾರು ಹತ್ತಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿದ್ದು
ದಿಢೀರ್ ಮಳೆಯಿಂದಾಗಿ ಮನೆಯಲ್ಲಿದ್ದ ದವಸ ಧಾನ್ಯಗಳಿಗೆ ಹಾನಿಯಾಗಿದೆ.

Ad Widget

ಗ್ರಾಮದಲ್ಲಿ ಭಾರಿ ಮಳೆಯಿಂದ ರಾತ್ರಿಯಿಡೀ ಜನರು ಪರದಾಟ ನಡೆಸಿದ್ದು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೇ ಎಲ್ಲೆಂದರಲ್ಲಿ ಮಳೆ ನೀರು ನುಗ್ಗಿದೆ.

ಕೊನೆಗೆ ನೀರು ಹೊರಹಾಕಲು ಮುಖ್ಯರಸ್ತೆಯನ್ನೇ ಜನರು ಅಗೆದಿದ್ದಾರೆ. ಅಧಿಕಾರಿಗಳು ರಸ್ತೆ ಅಗೆಯಲು ಸೂಚನೆ ನೀಡಿದ್ದು, ಜನರು ಮುಖ್ಯರಸ್ತೆಯನ್ನೇ ತುಂಡರಿಸಿದ್ದಾರೆ.

Leave a Comment

Your email address will not be published. Required fields are marked *