Ad Widget .

ಮಂಗಳೂರು: ಪ್ರವೀಣ್ ಹತ್ಯೆ ತನಿಖೆ ವಹಿಸಿಕೊಳ್ಳಲು ‌ಎನ್ಐಎ ಗೆ ಆದೇಶಿಸಿದ ಕೇಂದ್ರ ಗೃಹ ಇಲಾಖೆ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಕರ್ನಾಟಕ ಸರ್ಕಾರದ ಶಿಫಾರಸ್ಸಿನ ಮೇರೆಗೆ ಕೇಂದ್ರ ಸರ್ಕಾರದ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ದಳ ವಹಿಸಿಕೊಳ್ಳುವಂತೆ ಆದೇಶಿಸಿದೆ.

Ad Widget . Ad Widget .

ಭಾರತ ಸರ್ಕಾರದ ಅಧೀನ ಕಾರ್ಯದರ್ಶಿ ವಿಪುಲ್ ಅಲೋಕ್ ಆಗಸ್ಟ್‌ 3 ರಂದು ಈ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ಮಹಾನಿರ್ದೇಶಕರಾಗಿ ಪತ್ರ ಬರೆದು ಆದೇಶಿಸಿದ್ದಾರೆ. ಆದೇಶದ ಪ್ರತಿಯನ್ನು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಕರ್ನಾಟಕ ಡಿಜಿಪಿ ಅವರಿಗೆ ಕಳುಹಿಸಿಕೊಡಲಾಗಿದೆ.

Ad Widget . Ad Widget .

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣವನ್ನು ಎನ್​ಐಎಗೆ ಹಸ್ತಾಂತರಿಸಿದ ಕೇಂದ್ರ ಗೃಹ ಇಲಾಖೆ
ಪ್ರಕರಣವು ರಾಷ್ಟ್ರೀಯ ತನಿಖಾ ಸಂಸ್ಥೆ ಕಾಯಿದೆ- 2008 ರ ಅಡಿಯಲ್ಲಿ ಬರುವ ಅಪರಾಧ ಎಂಬ ಅಭಿಪ್ರಾಯಕ್ಕೆ ಕೇಂದ್ರ ಸರ್ಕಾರ ಬಂದಿದೆ. ಅಪರಾಧದ ಗಂಭೀರತೆ ಮತ್ತು ಅದರ ಅಂತಾರಾಜ್ಯ ಪರಿಣಾಮಗಳನ್ನು ಪರಿಗಣಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ ಕಾಯಿದೆ, 2008 ರ ಪ್ರಕಾರ ತನಿಖೆಗೆ ಒಳಪಡಿಸುವ ಅಗತ್ಯವಿದೆ ಎಂದು ಪತ್ರದಲ್ಲಿ ಬರೆಯಲಾಗಿದೆ.

ಪ್ರವೀಣ್ ನೆಟ್ಟಾರು ಅವರು ಬೆಳ್ಳಾರೆಯ ಮಾಸ್ತಿಕಟ್ಟೆ ಎಂಬಲ್ಲಿ ಅಕ್ಷಯ ಪ್ರೆಶ್ ಚಿಕನ್ ಫಾರ್ಮ್ ಎಂಬ ಕೋಳಿ ಅಂಗಡಿ ನಡೆಸುತ್ತಿದ್ದರು. ಜುಲೈ 26 ರಂದು ರಾತ್ರಿ 8 ಗಂಟೆ ಸುಮಾರಿಗೆ ಪ್ರವೀಣ್ ಬೈಕ್‌ನಲ್ಲಿ ಮನೆಗೆ ಹೊರಡಲು ಸಿದ್ದರಾಗಿದ್ದಾಗ ಬೈಕ್‌ನಲ್ಲಿ​ ಆಗಮಿಸಿದ ಮುಸುಕುಧಾರಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆಗೈದಿದ್ದರು.

Leave a Comment

Your email address will not be published. Required fields are marked *