ಮತ್ತೋರ್ವ ಹಿಂದೂ ಕಾರ್ಯಕರ್ತನಿಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್; ಆರ್ ಎಸ್ ಎಸ್ ಪ್ರಮುಖರೊಬ್ಬರ ಮುಖಕ್ಕೆ ಚಾಕುವಿನಿಂದ ಇರಿದ ಘಟನೆ ಕೋಲಾರ ಜಿಲ್ಲೆಯ ಮಾಲೂರಿನ ಮಾರಿಕಾಂಬ ರಸ್ತೆಯಲ್ಲಿ ನಡೆದಿದೆ.

Ad Widget ... ..

ಆರ್ ಎಸ್ ಎಸ್ ಪ್ರಮುಖ ರವಿ ಚಾಕು ಇರಿತದಿಂದ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಟಚ್ ಆಗಿದ್ದಕ್ಕೆ ಅಂಗಡಿಯ ಮುಂದೆ ಎರಡು ಗುಂಪುಗಳ ನಡುವೆ ಜಗಳ ಆರಂಭವಾಗಿದೆ.

Ad Widget

ಈ ವೇಳೆ ಜಗಳ ಬಿಡಿಸಲು ಮುಂದಾದ ರವಿ ಮೇಲೆ ಇಬ್ಬರು ವ್ಯಕ್ತಿಗಳು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ರವಿ ಅವರ ಮುಖಕ್ಕೆ ಚಾಕುವಿನಿಂದ ಇರಿಯಲಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *