Ad Widget .

ಭಾರೀ ಮಳೆ ಹಿನ್ನೆಲೆ| ಹಾಸನದ ಈ ತಾಲೂಕಿನ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಳೆಯ ಆರ್ಭಟ ಇಂದು ಕೂಡ ಮುಂದುವರಿಯಲಿದ್ದು, ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಮಕ್ಕಳ ಹಿತದೃಷ್ಟಿಯಿಂದ ಇದೀಗ ಹಾಸನ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸಕಲೇಶಪುರ ತಾಲೂಕಿನ ಅಂಗನವಾಡಿ ಮತ್ತು ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಿ ತಹಶೀಲ್ದಾರ್ ಎಚ್.ಬಿ.ಜೈಕುಮಾರ್​​ ಅವರು ಆದೇಶ ಹೊರಡಿಸಿದ್ದಾರೆ.

Ad Widget . Ad Widget .

ಕಳೆದ ಒಂದು ವಾರದಿಂದ ಹಾಸನ ಜಿಲ್ಲೆಯ ಬಯಲು ಸೀಮೆಯಲ್ಲಿ ವರುಣಾರ್ಭಟ ನಡೆಯುತ್ತಿದ್ದು, ಮಲೆನಾಡು ಭಾಗದಲ್ಲಿಯೂ ಮಳೆಯ ಆರ್ಭಟ ಆರಂಭಗೊಂಡಿದೆ. ಈ ಮುನ್ಸೂಚನೆ ಹಿನ್ನೆಲೆ ಹಾಸನ ಜಿಲ್ಲೆಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಈ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುವ ಮುನ್ಸೂಚನೆ ಹಿನ್ನೆಲೆ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಸಕಲೇಶಪುರ ತಹಸೀಲ್ದಾರ್ ಎಚ್.ಬಿ.ಜೈಕುಮಾರ್ ಅವರು ತಾಲ್ಲೂಕಿನ ಅಂಗನವಾಡಿ ಹಾಗೂ ಪ್ರೌಡ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *