ಟಾಟಾ ಸುಮೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ; ಓರ್ವ ಸಾವು, ಮೂವರು ಗಂಭೀರ ಗಾಯ

ಸಮಗ್ರ ನ್ಯೂಸ್ : ಜಿಲ್ಲೆಯ ನೆಲಮಂಗಲದ ಬಳಿಯಲ್ಲಿ ಟಾಟಾ ಸುಮೋ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಸ್ಥಳದಲ್ಲೇ ಓರ್ವ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ನಡೆದಿದೆ.

Ad Widget ... ..

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕಂಬಳ ಬಳಿಯಲ್ಲಿ ಟಾಟಾ ಸುಮೋ ಪಲ್ಟಿಯಾದ ಪರಿಣಾಮ, ಕಾರಿನಲ್ಲಿದ್ದಂತ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

Ad Widget

ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತ ವ್ಯಕ್ತಿಯನ್ನು ವಿಜಯಪುರ ಜಿಲ್ಲೆಯ ತಾಳಿಕೋಟೆ ಮೂಲದ ಮೊಹಮ್ಮದ್ (73) ಎಂಬುದಾಗಿ ಗುರುತಿಸಲಾಗಿದೆ.

ಇವರು ಮಾಗಡಿಯಿಂದ ತುಮಕೂರಿಗೆ ವಾಪಸ್ಸಾಗುವ ವೇಳೆ ಈ ಘಟನೆ ನಡೆದಿದೆ. ಈ ಸಂಬಂಧ ದಬಾಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *