ಕೊಡಗು: ಭಾರೀ ಮಳೆಯ ಕಾರಣ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು(ಆ.8) ರಜೆ ಘೋಷಿಸಿ ಡಿಡಿಪಿಐ ವೇದಮೂರ್ತಿ ಆದೇಶ ಹೊರಡಿಸಿದ್ದಾರೆ.

Ad Widget ... .. Ad Widget .

ಕೊಡಗು ಜಿಲ್ಲೆಯಲ್ಲಿ ಬಿಡುವು ನೀಡದೆ ಮಳೆ ಸುರಿಯುತ್ತಿದೆ. ಧಾರಾಕಾರ ಮಳೆ ಆಗುತ್ತಿರುವುದರಿಂದ ಜಿಲ್ಲೆಯ ಅಲ್ಲಲ್ಲಿ ಹಾನಿಯಾಗಿ, ಹೊದವಾಡ-ಕೊಟ್ಟಮುಡಿಯಿಂದ ನಾಪೋಕ್ಲುವಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಅರ್ಧ ಭಾಗ ಕುಸಿದಿದ್ದು, ವಾಹನ ಸಂಚಾರ ವ್ಯತ್ಯಯ ಉಂಟಾಗಿದೆ.

Ad Widget

Leave a Comment

Your email address will not be published. Required fields are marked *