Ad Widget .

ಕಾಡಸಿದ್ದೇಶ್ವರ ಸ್ವಾಮೀಜಿಯವರಿಗೆ ರಸ್ತೆ ಅಪಘಾತ !

ಸಮಗ್ರ ನ್ಯೂಸ್: ಶ್ರೀ ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಇಂದು ಬೆಳಿಗ್ಗೆ ಗದಗ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ತೋಗುಣಸಿ ತಾಂಡಾದ ಬಳಿ ಈ ಅಪಘಾತ ಸಂಭವಿಸಿದೆ.

Ad Widget . Ad Widget .

ಸ್ವಾಮೀಜಿ, ಗದಗ ಜಿಲ್ಲೆ ಹಾಲಕೇರಿಯಿಂದ ಗುಳೇದಗುಡ್ಡ ಪಟ್ಟಣಕ್ಕೆ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಗುಳೇದಗುಡ್ಡ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಮಠಕ್ಕೆ ಸ್ವಾಮೀಜಿ ತೆರಳಿದ್ದಾರೆ.

Ad Widget . Ad Widget .

ಚಾಲಕನ ನಿಯಂತ್ರಣ ತಪ್ಪಿದ ಕಾರು ನೀಲಗಿರಿ ಮರಕ್ಕೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಸ್ವಾಮೀಜಿ ಹಾಗೂ ಚಾಲಕ ಸೇರಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಅಪಘಾತದಲ್ಲಿ ಅದೃಷ್ಟವಶಾತ್​ ಸ್ವಾಮೀಜಿ ಮತ್ತು ಕಾರಿನಲ್ಲಿದ್ದ ಇತರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Leave a Comment

Your email address will not be published. Required fields are marked *