Ad Widget .

ಜನ್ಮದಿನದಂದೇ ನೇಣಿಗೆ ಶರಣಾದ ಉಪನ್ಯಾಸಕಿ

ಸಮಗ್ರ ನ್ಯೂಸ್: ಜನ್ಮದಿನದಂದೇ ಕಾಲೇಜು ಉಪನ್ಯಾಸಕಿ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ನಗರದ ಜೆ ಎಸ್ ಎಸ್ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ಚಂದನಾ (26) ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕಿ.

Ad Widget . Ad Widget .

ಯಳಂದೂರು ತಾಲ್ಲೂಕು ಅಂಬಳೆ ಗ್ರಾಮದ ನ್ಯಾಯಬೆಲೆ ಅಂಗಡಿ ಮಾಲೀಕ ಮಹದೇವಸ್ವಾಮಿ ಅವರ ಪುತ್ರಿ ಚಂದನಾ, ಮಂಗಳವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಜೆಎಸ್ ಎಸ್ ಕಾಲೇಜು ಕ್ಯಾಂಪಸ್ ನಲ್ಲಿರುವ ಹಾಸ್ಟೇಲ್‌ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Ad Widget . Ad Widget .

ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್ ನೋಟ್ ನಲ್ಲಿ ಚಂದನಾ ಬರೆದಿದ್ದು, ಘಟನೆಗೆ ನಿಖರ ಕಾರಣ ತಿಳಿಸಿಲ್ಲ. ಇಂದು ಚಂದನಾ ಅವರ ಜನ್ಮದಿನವಾಗಿದ್ದು ಹಾಸ್ಟೆಲ್ ಸಹೋದ್ಯೋಗಿಗಳು ಬೆಳಿಗ್ಗೆ ಶುಭ ಕೋರಿದ್ದಾರೆ. ತಿಂಡಿಗೆ ಕರೆದಾಗ ನನ್ನ ಮೂಡ್ ಚೆನ್ನಾಗಿಲ್ಲ. ಆಮೇಲೆ ಬರುತ್ತೇನೆ ಎಂದು ಹೇಳಿದ್ದಾರೆ. ಕೆಲಔೇ ಗಂಟೆಗಳಲ್ಲಿ ಸಾವಿಗೆ ಶರಣಾಗಿದ್ದಾರೆ. ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Leave a Comment

Your email address will not be published. Required fields are marked *