ಮಂಗಳೂರಿನಿಂದ ಕಾಶ್ಮೀರ

ಏಕಾಂಗಿಯಾಗಿ ಬೈಕ್ ನಲ್ಲಿ ದೇಶಾದ್ಯಂತ ಪರ್ಯಟನೆ ಮಾಡಿದ ಅಮೃತಾ

Ad Widget ... ..

ಮಂಗಳೂರು: ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ಸವಿನೆನಪಿನಲ್ಲಿ ಕಾಸರಗೋಡು ಮೂಲದ, ಮಂಗಳೂರಿನ ಕೆನರಾ ಗರ್ಲ್ಸ್ ಹೈಸ್ಕೂಲ್ ನ ಹಳೆ ವಿದ್ಯಾರ್ಥಿನಿ ಅಮೃತಾ ಜೋಷಿ ಏಕಾಂಗಿಯಾಗಿ ಬೈಕ್ ನಲ್ಲಿ ದೇಶಾದ್ಯಂತ ಪರ್ಯಟನೆ ಮಾಡಿದ್ದಾರೆ.

Ad Widget

21 ವರ್ಷ ಅಮೃತಾ ಜೋಷಿ ತಿರಂಗಾ ಯಾತ್ರಾ ಅಭಿಯಾನದ ಅಂಗವಾಗಿ , ದೇಶದ ಏಕತೆಯನ್ನು ಸಾರಲು ಕಳೆದ 3 ತಿಂಗಳುಗಳಿಂದ ಏಕಾಂಗಿಯಾಗಿ ಬೈಕ್ ನಲ್ಲಿ 22000 ಕಿ.ಮೀ ಸಂಚರಿಸಿ ದೇಶಾದ್ಯಂತ ಪರ್ಯಟನೆ ಮಾಡಿದ್ದಾರೆ.

ಈಶಾನ್ಯ ಭಾರತ, ಕಾಶ್ಮೀರ ಸೇರಿದಂತೆ ಬರ್ಮಾ, ಬಾಂಗ್ಲಾ, ನೇಪಾಳದ ಗಡಿಯಲ್ಲಿಯೂ ಸಂಚರಿಸಿ ಅಲ್ಲಿ ನಮ್ಮ ಭಾರತೀಯ ಸೈನಿಕರ ಸವಾಲಿನ ಪರಿಸ್ಥಿತಿಯನ್ನು ಕೂಡ ಕಣ್ಣಾರೆ ಕಂಡು ಬಂದಿದ್ದಾರೆ.

ರಾಜ್ಯದ ಸಾಂಸ್ಕೃತಿಕ ರಾಯಭಾರಿ ಎನ್ನುವ ಹೆಗ್ಗಳಿಕೆಯನ್ನು ಪಡೆದುಕೊಂಡಿರುವ ಅಮೃತಾ ಜೋಷಿಯವರಿಗೆ ಡೊಂಗರಕೇರಿ ಕೆನರಾ ಹೈಸ್ಕೂಲಿಗೆ ಭೇಟಿ ನೀಡಲಿದ್ದು, ಕೆನರಾ ಅಸೋಸಿಯೇಶನ್ ವತಿಯಿಂದ ಅದ್ದೂರಿಯಾಗಿ ಇಂದು ಅಭಿನಂದಿಸಲಾಗುವುದು.

Leave a Comment

Your email address will not be published. Required fields are marked *