ಸಮಗ್ರ ನ್ಯೂಸ್: ಬಿಹಾರದಲ್ಲಿ ಮಹಾಘಟಬಂಧನ ಸರ್ಕಾರ ರಚನೆಯಾಗಿದ್ದು, ನಿತೀಶ್ ಕುಮಾರ್ ಅವರು ದಾಖಲೆಯ 8 ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಇಂದು ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿತೀಶ್ ಕುಮಾರ್ ಅವರಿಗೆ ರಾಜ್ಯಪಾಲ ಫಗು ಚೌಹಾಣ್ ಅವರು ಪ್ರಮಾಣ ವಚನ ಬೋಧಿಸಿದರು. ಇನ್ನು ಆರ್ ಜೆ ಡಿ ಯ ತೇಜಸ್ವಿ ಯಾದವ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡಿರುವ ಜೆಡಿಯು ಪಕ್ಷ ಆರ್ ಜೆಡಿ, ಕಾಂಗ್ರೆಸ್ ಸೇರಿದಂತೆ 7 ಪಕ್ಷಗಳು ಮತ್ತು ಒಬ್ಬ ಪಕ್ಷೇತರ ಶಾಸಕ ಸೇರಿ 164 ಶಾಸಕರ ಬೆಂಬಲದೊಂದಿಗೆ ಮಹಾಘಟಬಂಧನ ಸರ್ಕಾರವನ್ನು ರಚಿಸಿದೆ. ನಿತೀಶ್ ಕುಮಾರ್ ಅವರು ದಾಖಲೆಯ 8 ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.