ಬೆಳ್ತಂಗಡಿ: ಹೃದಯಾಘಾತದಿಂದ ವಿದ್ಯಾರ್ಥಿ ಸಾವು

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲ್ಲೂಕಿನ ನೆರಿಯಾ ಗ್ರಾಮದ ಪಿಲಿಕಳ ಪಂಪ್ ಹೌಸ್ ಬಳಿಯ ನಿವಾಸಿ ಸಚಿನ್ (17) ಮಂಗಳವಾರ ಹೃದಯಘಾತದಿಂದ ಮನೆಯಲ್ಲಿ ಮೃತಪಟ್ಟಿದ್ದಾನೆ.

Ad Widget ... ..

ಮುಂಡಾಜೆ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಈತ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ.

Ad Widget

ಮಂಗಳವಾರ ಕಾಲೇಜಿಗೆ ರಜೆ ಇದ್ದು, ಮನೆಯಲ್ಲಿದ್ದ ಸಂದರ್ಭ ಏಕಾಏಕಿ ಎದೆನೋವು ಕಾಣಿಸಿಕೊಂಡಿತ್ತು. ಅವಳಿ ಮಕ್ಕಳ ಪೈಕಿ ಒಬ್ಬನಾಗಿದ್ದ ಈತನಿಗೆ ತಂದೆ, ತಾಯಿ, ಹಾಗೂ ಇಬ್ಬರು ಸಹೋದರರು ಇದ್ದಾರೆ.

Leave a Comment

Your email address will not be published. Required fields are marked *