Ad Widget .

ಮನೆಗೆ ಮರಳುತ್ತಿದ್ದ ಸನ್ನಿಧಿ ದೇವರ ಪಾದಕ್ಕೆ| ಕಾಲುಸಂಕದಿಂದ ಬಿದ್ದ ವಿದ್ಯಾರ್ಥಿನಿಯ ಶವ ಪತ್ತೆ

ಸಮಗ್ರ ನ್ಯೂಸ್: ಶಾಲೆಯಿಂದ ಮನೆಗೆ ಹೋಗುತ್ತಿದ್ದ ವೇಳೆ ಕಾಲುಸಂಕದಿಂದ ಆಯತಪ್ಪಿ ನೀರಿಗೆ ಬಿದ್ದು ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದ ಕಾಲ್ತೋಡು ಗ್ರಾಮದ ಮಕ್ಕಿಮನೆ ನಿವಾಸಿ 2ನೇ ತರಗತಿಯ ವಿದ್ಯಾರ್ಥಿನಿ ಸನ್ನಿಧಿ (7) ಮೃತದೇಹ ಇಂದು ಸಂಜೆ ಅಲ್ಲೇ ಸಮೀಪದಲ್ಲಿ ಪತ್ತೆಯಾಗಿದೆ.

Ad Widget . Ad Widget .

ಕಾಲ್ತೋಡು ಗ್ರಾಮದ ಬೀಜಮಕ್ಕಿ ಎಂಬಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ನಿರಂತರವಾಗಿ ಶೋಧ ಕಾರ್ಯ ನಡೆಸಿದರೂ ಕೂಡ ಬುಧವಾರ ಸಂಜೆವರೆಗೂ ಬಾಲಕಿಯ ಬಗ್ಗೆ ಸುಳಿವು ಇರಲಿಲ್ಲ. ಅಗ್ನಿಶಾಮಕ ದಳ ಸಿಬ್ಬಂದಿ, ಈಜುಪಟುಗಳಾದ ಮೀನುಗಾರ ನರೇಶ್ ಕೊಡೇರಿಯವರ ಮುಂದಾಳತ್ವದ 22 ಜನರ ತಂಡ, ಸಾರ್ವಜನಿಕರೂ ಸೇರಿ ನೂರಕ್ಕೂ ಅಧಿಕ ಮಂದಿ ಶೋಧ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಕಾರ್ಯಾಚರಣೆಗೆ ಎರಡು ದೋಣಿ ಗಳನ್ನು ಬಳಿಸಿಕೊಳ್ಳಲಾಗಿತ್ತು.

Ad Widget . Ad Widget .

ಇದೀಗ ಬಾಲಕಿಯ ಮೃತದೇಹವು 48ಗಂಟೆಗಳ ಬಳಿಕ ಕಾಲು ಸಂಕದಿಂದ 400 ಮೀಟರ್ ದೂರದ ಹಳ್ಳದ ನೀರಿನಲ್ಲಿ ಪತ್ತೆಯಾಗಿದೆ ಎಂದು ತಹಶೀಲ್ದಾರ್ ಕಿರಣ್ ಗೋರಯ್ಯ ತಿಳಿಸಿದ್ದಾರೆ.

Leave a Comment

Your email address will not be published. Required fields are marked *