ಸಮಗ್ರ ನ್ಯೂಸ್: ಎಸಿಬಿ ರಚನೆ ಸರ್ಕಾರದ ಆದೇಶ ರದ್ದುಪಡಿಸಿರುವ ಹೈಕೋರ್ಟ್, ಎಸಿಬಿಯನ್ನು ಲೋಕಾಯುಕ್ತ ವ್ಯಾಪ್ತಿಗೆ ನೀಡಿ ಮಹತ್ವದ ಆದೇಶ ಹೊರಡಿಸಿದೆ.
ಎಸಿಬಿ ರಚನೆ ಆದೇಶಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್ ನ ನ್ಯಾ.ಬಿ.ವೀರಪ್ಪ, ನ್ಯಾ.ಕೆ.ಎಸ್. ಹೇಮಲೇಖಾ ಅವರಿದ್ದ ಪೀಠ, ಎಸಿಬಿಗೆ ಪೊಲೀಸ್ ಠಾಣೆ ಸ್ಥಾನಮಾನವನ್ನು ರದ್ದುಪಡಿಸಿ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಇದೇ ವೇಳೆ ಕರ್ನಾಟಕ ಲೋಕಾಯುಕ್ತ ಕಾಯ್ದೆ ತಿದ್ದುಪಡಿ ಅಗತ್ಯವಿದೆ. ಮೂರು ವರ್ಷಗಳ ಅವಧಿಗೆ ಅಧಿಕಾರಿಗಳ ನೇಮಕ ಮಾಡಬೇಕು. ಲೋಕಾಯುಕ್ತರ ನೇಮಕದ ವೇಳೆ ಅರ್ಹತೆ ಪರಿಗಣಿಸಬೇಕು. ಜಾತಿ ಆಧಾರದ ಮೇಲೆ ಲೋಕಾಯುಕ್ತ, ಉಪಲೋಕಾಯುಕ್ತರ ನೇಮಕವಾಗಬಾರದು. ಭ್ರಷ್ಟಾಚಾರ ಆರೋಪ ಹೊತ್ತವರು ಯಾವ ಕಾರಣಕ್ಕೂ ಪಾರಾಗಬಾರದು. ಹೀಗಾಗಿ ಲೋಕಾಯುಕ್ತ ಪೊಲೀಸರೇ ತನಿಖೆ ಮುಂದುವರೆಸಬೇಕು ಎಂದು ಅಭಿಪ್ರಾಯಪಟ್ಟಿದೆ.