ಕೊರೊನಾ ಹೆಚ್ಚಳ ಹಿನ್ನಲೆ| ರಾಜ್ಯದಲ್ಲಿ ಮಾಸ್ಕ್ ಧಾರಣೆ ಕಡ್ಡಾಯ – ಸಚಿವ ಡಾ. ಸುಧಾಕರ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿವೆ. ಈ ಹಿನ್ನಲೆಯಲ್ಲಿಯೇ ಇದೀಗ ರಾಜ್ಯ ಸರ್ಕಾರದಿಂದ ರಾಜ್ಯಾಧ್ಯಂತ ಮಾಸ್ಕ್ ಕಡ್ಡಾಯಗೊಳಿಸಿ ಆದೇಶಿಸಿದೆ.

Ad Widget ... ..

ಇಂದು ಕೋವಿಡ್ ನಿಯಂತ್ರಣ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, ರಾಜ್ಯದಲ್ಲಿ ಮಾಸ್ಕ್ ಎಲ್ಲರೂ ಧರಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು.

Ad Widget

ಕೊರೋನಾ ಹೆಚ್ಚಳ ಕಾರಣದಿಂದಾಗಿ 60 ವರ್ಷ ಮೇಲ್ಪಟ್ಟವರು ತಪ್ಪದೇ ಶೀಘ್ರವೇ 3ನೇ ಬೂಸ್ಟರ್ ಡೋಸ್ ಲಸಿಕೆಯನ್ನು ಪಡೆಯಬೇಕು. ಇಂದಿನ ಸಭೆಯಲ್ಲಿ ಮಂಕಿಪಾಕ್ಸ್ ನಿಯಂತ್ರಣ ಕುರಿತಂತೆಯೂ ಚರ್ಚಿಸಲಾಗಿದೆ ಎಂದು ಹೇಳಿದರು.

Leave a Comment

Your email address will not be published. Required fields are marked *