Ad Widget .

ನಾಳೆ(ಆ.12)ಯಿಂದ‌ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ| ಈ ನಿಯಮಗಳು ಕಡ್ಡಾಯ

ಸಮಗ್ರ ನ್ಯೂಸ್: 2021-21ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆ.12 ರಿಂದ 25ರವರೆಗೆ ನಡೆಯಲಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯವಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪ್ರತಿ ಕೇಂದ್ರಗಳಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ನೇಮಿಸಲಾಗಿದೆ. ಮೊಬೈಲ್ ಮತ್ತಿತರ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರದೊಳಗೆ ವಿದ್ಯಾರ್ಥಿಗಳು ಕೊಂಡೊಯ್ಯಲು ಅವಕಾಶವಿಲ್ಲ.

Ad Widget . Ad Widget . Ad Widget .

ಪರೀಕ್ಷಾ ಕೇಂದ್ರದ ಸುತ್ತಲಿನ 200ಮೀ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಈ ವಲಯದ ಒಳಗೆ ಪರೀಕ್ಷಾರ್ಥಿಗಳು ಮತ್ತು ಸಂಬಂಧಪಟ್ಟವರನ್ನು ಹೊರತುಪಡಿಸಿ ಬೇರೆ ಯಾರಿಗೂ ಅವಕಾಶವಿಲ್ಲ.

ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ವಿತರಿಸಲು ಪ್ರತಿ ತಾಲೂಕಿನಲ್ಲಿ ತ್ರಿಸದಸ್ಯ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯಲ್ಲಿ ತಹಶೀಲ್ದಾರ್, ಬಿಇಒ ಮತ್ತು ಪ್ರಾಂಶುಪಾಲರು ಸದಸ್ಯರಾಗಿರುವರು. ಪ್ರಶ್ನೆ ಪತ್ರಿಕೆಯನ್ನು ಪರೀಕ್ಷಾ ಕೇಂದ್ರಕ್ಕೆ ಕೊಂಡೊಯ್ಯುವ ವಾಹನಕ್ಕೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಸಬೇಕು. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳಿಗೆ ವಿದ್ಯುತ್ ವ್ಯತ್ಯಯ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಪ್ರಶ್ನೆ ಪತ್ರಿಕೆಯನ್ನು ಪರೀಕ್ಷಾ ಕೇಂದ್ರಕ್ಕೆ ಸಾಗಿಸುವ ವಾಹನದೊಂದಿಗೆ ಸೂಕ್ತ ಪೊಲೀಸ್ ಬಂದೋಬಸ್ತು ಕೂಡ ಕೈಗೊಳ್ಳಲಾಗಿದೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ:
12-08-2022 – ಕನ್ನಡ, ಅರೇಬಿಕ್ 13-08-2022 – ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ
16-08-2022 – ಹಿಂದಿ
17-08-2022 – ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ
18-08-2022 – ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
19-08-2022 – ರಾಜ್ಯ ಶಾಸ್ತ್ರ, ಗಣಿತ ಶಾಸ್ತ್ರ
20-08-2022 – ತರ್ಕಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ
22-08-2022 – ಇಂಗ್ಲೀಷ್
23-08-2022 – ಅರ್ಥಶಾಸ್ತ್ರ, ಜೀವಶಾಸ್ತ್ರ
24-08-2022-ಇತಿಹಾಸ, ಸಂಖ್ಯಾಶಾಸ್ತ್ರ
25-08-2022 – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

Leave a Comment

Your email address will not be published. Required fields are marked *