Ad Widget .

ಮಂಗಳೂರು: ವಿದ್ಯಾರ್ಥಿಗಳ ಕೈಲಿದ್ದ ರಾಖಿ ತೆಗೆದು ಕಸದಬುಟ್ಟಿಗೆ ಎಸೆದ ಶಿಕ್ಷಕರು

ಸಮಗ್ರ ನ್ಯೂಸ್: ಮಕ್ಕಳ ಕೈಯ್ಯಲ್ಲಿದ್ದ ರಕ್ಷಾ ಬಂಧನದ ರಾಖಿ ಕಿತ್ತೆಸೆದ ಆರೋಪದ ಹಿನ್ನೆಲೆ ಪೋಷಕರು‌ ಮತ್ತು ಬಿಜೆಪಿ ಕಾರ್ಯಕರ್ತರಿಂದ ಶಾಲೆಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿರುವ ಘಟನೆ ಮಂಗಳೂರು ಹೊರವಲಯದ ಕಾಟಿಪಳ್ಳದ ಖಾಸಗಿ ಶಾಲೆಯಲ್ಲಿ ನಡೆದಿದೆ.

Ad Widget . Ad Widget .

ಕಾಟಿಪಳ್ಳದ ಇನ್ಫೆಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಿನ್ನೆ ‌ರಕ್ಷಾಬಂಧನ ಹಿನ್ನೆಲೆ ಕೈಗೆ ರಾಖಿ ಕಟ್ಟಿಕೊಂಡು ಮಕ್ಕಳು ಹೋಗಿದ್ದರು, ಆದರೆ ರಾಖಿ ತೆಗೆಸಿ ಕೆಲ ಶಿಕ್ಷಕರು ಕಸದ ಬುಟ್ಟಿಗೆ ಎಸೆದಿದ್ದಾರೆ ಎಂದು ಆರೋಪ ಕೇಳಿ ಬರುತ್ತಿದೆ. ಈ ಹಿನ್ನೆಲೆ ಶಾಲೆಗೆ ಆಗಮಿಸಿ ಮುಖ್ಯಶಿಕ್ಷಕ ಮತ್ತು ಶಿಕ್ಷಕರಿಗೆ ಪೋಷಕರ ತರಾಟೆ ತೆಗೆದುಕೊಂಡಿದ್ದಾರೆ.

Ad Widget . Ad Widget .

ಬಿಜೆಪಿ ಯುವಮೋರ್ಛಾ ಕಾರ್ಯಕರ್ತರಿಂದಲೂ ಶಾಲಾಡಳಿತದ ವಿರುದ್ದ ಆಕ್ರೋಶ ವ್ಯಕ್ತಪಡಿಸಲಾಗುತ್ತಿದ್ದು, ಪೋಷಕರು ‌ಮತ್ತು ಶಿಕ್ಷಕರ ವಾಗ್ವಾದದ ಹಿನ್ನೆಲೆ ಸುರತ್ಕಲ್ ಪೊಲೀಸರ ಮಧ್ಯಪ್ರವೇಶಿಸಿದ್ದಾರೆ. ಫ್ರೆಂಡ್ ಶಿಪ್ ಬ್ಯಾಂಡ್ ಅಂದುಕೊಂಡು ತೆಗೆಸಿದ್ದಾಗಿ ಶಿಕ್ಷಕರ ಸಮಜಾಯಿಷಿ ಕೊಟ್ಟಿದ್ದು, ರಕ್ಷಾ ಬಂಧನ ಯಾವುದೇ ಕಾರಣಕ್ಕೂ ತೆಗೆಸಲ್ಲ ಅಂತ ಶಾಲಾ ಮುಖ್ಯಶಿಕ್ಷಕ ವಿಷಾಧ ವ್ಯಕ್ತಪಡಿಸಿದ್ದಾರೆ. ಶಿಕ್ಷಕರೇ ಮತ್ತೆ ಮಕ್ಕಳ ಕೈಗೆ ರಕ್ಷೆ ಕಟ್ಟುವಂತೆ ಪೋಷಕರ ಪಟ್ಟು ಹಿಡಿದ್ದಾರೆ.

Leave a Comment

Your email address will not be published. Required fields are marked *