ವಿಶ್ವ ಅಂಗಾಂಗ ದಾನ ದಿನಾಚರಣೆ ಪ್ರಯುಕ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂಗಾಂಗ ದಾನಕ್ಕೆ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ.
ಅಂಗಾಂಗ ದಾನ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ದಿವಂಗತ ನಟ ಪುನೀತ್ ರಾಜ್ಕುಮಾರ್ ಮತ್ತು ಮತ್ತೋರ್ವ ದಿವಂಗತ ನಟ ಸಂಚಾರಿ ವಿಜಯ್ ಅವರನ್ನು ನೆನೆದರು. ಅಲ್ಲದೆ ಪುನೀತ್ ರಾಜಕುಮಾರ್ ಹಾಗೂ ನಟ ಸಂಚಾರಿ ವಿಜಯ್ ಕಣ್ಣು ದಾನ ಮಾಡಿ ಇತರರಿಗೆ ಬೆಳಕಾಗಿದ್ದಾರೆ ಎಂದು ಸ್ಮರಿಸಿದರು.
ಅಂಗಾಂಗ ದಾನದ ಮೂಲಕ ಸತ್ತನಂತರವೂ ಬದುಕಬಹುದು. ಮುಂದಿನ ದಿನಗಳಲ್ಲಿ ಯುವಕರೆಲ್ಲರೂ ಅಂಗಾಂಗ ದಾನಕ್ಕೆ ಮುಂದೆ ಬರಬೇಕಾಗಿದೆ. ರಾಜ್ಯಾದ್ಯಂತ 18 ಕೇಂದ್ರಗಳಿವೆ. ಈ ಕೇಂದ್ರಗಳಲ್ಲಿ ಅಂಗಾಂಗ ದಾನ ಮಾಡಲು ಇಚ್ಛಿಸುವವರು ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಸಿಎಂ ಬೊಮ್ಮಾಯಿ ಹೇಳಿದರು.
ವ್ಯಕ್ತಿ ಮೃತಪಟ್ಟ6 ಗಂಟೆಯೊಳಗೆ ಅಂಗಾಗ ದಾನ ಮಾಡಬೇಕಾಗುತ್ತದೆ. ದೂರದ ಸ್ಥಳಗಳಲ್ಲಿ ಯಾವುದಾದರೂ ಅಪಘಾತ ಅಥವಾ ಇನ್ಯಾವುದೇ ಕಾರಣದಿಂದ ವ್ಯಕ್ತಿ ಮೃತಪಟ್ಟರೆ ಅವರ ಕುಟುಂಬದವರು ಮೃತ ವ್ಯಕ್ತಿಯ ಅಂಗಾಗ ದಾನ ಮಾಡಿದರೆ ಸಮಯಕ್ಕೆ ಸರಿಯಾಗಿ ಅದನ್ನು ಬಳಸಿಕೊಳ್ಳಲು ಏರ್ ಆಂಬ್ಯುಲೆನ್ಸ್ ಸೌಲಭ್ಯ ಬೇಕಾಗುತ್ತದೆ. ಈ ಬಗ್ಗೆ ಚಿಂತನೆ ನಡೆದಿದೆ ಎಂದಿದ್ದಾರೆ.