Ad Widget .

ದೇಶಾದ್ಯಂತ ಮನೆಮನೆಯಲ್ಲೂ ಹಾರಾಡಲಿದೆ ತ್ರಿವರ್ಣ ಧ್ವಜ| ನೆನಪಿರಲಿ ಈ ಕೆಲಸ ಎಚ್ಚರಿಕೆಯಿಂದ ಮಾಡಿ!

ಸಮಗ್ರ ನ್ಯೂಸ್: ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಅಂಗವಾಗಿ ಜಿಲ್ಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಶಾಲಾ- ಕಾಲೇಜುಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ, ವಾಣಿಜ್ಯ ಮತ್ತು ಕೈಗಾರಿಕಾ ಕಟ್ಟಡಗಳಲ್ಲಿ, ಗ್ರಾಮ ಪಂಚಾ​ಯಿತಿ ಮಟ್ಟದಲ್ಲಿ, ಕೋಟೆ ಕೊತ್ತಲಗಳಲ್ಲಿ, ಐತಿಹಾಸಿಕ ಸ್ಥಳಗಳಲ್ಲಿ ಸೇರಿದಂತೆ ಮನೆ ಮನೆಯಲ್ಲೂ ರಾಷ್ಟ್ರಧ್ವಜ ಹಾರಾಡಲಿವೆ.

Ad Widget . Ad Widget .

ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಾಡಬೇಕು ಎಂಬ ಪ್ರಧಾನಮಂತ್ರಿ ಮೋದಿ ಆಶಯದಂತೆ ಜಿಲ್ಲೆಯಲ್ಲೂ ‘ಹರ್‌ ಘರ್‌ ತಿರಂಗಾ’ ಧ್ವಜ ಶನಿವಾರದಿಂದ ಹಾರಾಡಲಿದೆ. ಇದಕ್ಕಾಗಿ ಬಿಜೆಪಿ ಸೇರಿದಂತೆ ವಿವಿಧ ಸಂಘಟನೆಗಳು ಸರ್ಕಾರದ ಜೊತೆ ಕೈ ಜೋಡಿಸಿವೆ. ಜನರು ಸ್ವಯಂಪ್ರೇರಿತರಾಗಿ ಈ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ.

Ad Widget . Ad Widget .

ಧ್ವಜ ಸಂಹಿತೆ ನಿಯಮಗಳೇನು?
ಆ.13ರಿಂದ 15ರ ವರೆಗೆ ಪ್ರತಿದಿನ ಸೂರ್ಯೋದಯದ ನಂತರ ಬೆಳಿಗ್ಗೆ 8ರೊಳಗೆ ಧ್ವಜಾರೋಹಣ ಮಾಡುವುದು, ಹಾಗೆಯೇ ಸೂರ್ಯಾಸ್ತದ ವೇಳೆಗೆ ಇಳಿಸಬೇಕು. ಧ್ವಜ ಸಂಹಿತೆಯ ಯಾವುದೇ ಉಲ್ಲಂಘನೆಯಾಗದಂತೆ ಮತ್ತು ರಾಷ್ಟ್ರಧ್ವಜಕ್ಕೆ ಯಾವುದೇ ಅಗೌರವ ಉಂಟಾಗದಂತೆ ಜಾಗ್ರತೆ ವಹಿಸಬೇಕು.

ಜಿಲ್ಲೆಯ ಎಲ್ಲಾ ಮನೆಗಳ ಮೇಲೆ ಆ.13 ರಂದು ಸೂರ್ಯೋದಯದ ನಂತರ ಬೆಳಿಗ್ಗೆ 8 ಗಂಟೆಯೊಳಗೆ ಧ್ವಜಾರೋಹಣ ಮಾಡಿ ಹಾಗೂ ಹಗಲು ರಾತ್ರಿ ನಿರಂತರವಾಗಿ ಧ್ವಜ ಹಾರಿಸಿ ಆ.15ರ ಸೂರ್ಯಾಸ್ತದ ವೇಳೆಗೆ ಇಳಿಸುವಂತೆ ಸೂಚಿಸಿದೆ. ತ್ರಿವರ್ಣ ಧ್ವಜವನ್ನು ಏರಿಸುವಾಗ ಧ್ವಜದ ಹಸಿರು ಬಣ್ಣ ಕೆಳಗೆ ಇರುವಂತೆ ಕೇಸರಿ ಬಣ್ಣ ಮೇಲೆ ಇರುವಂತೆ ಹಾರಿಸುತ್ತಾ, ಧ್ವಜವನ್ನು ಯಾವಾಗಲೂ ಪೂರ್ಣ ಗೌರವ ಮತ್ತು ಉತ್ಸಾಹದಿಂದ ಶೀಘ್ರಗತಿಯಲ್ಲಿ ಏರಿಸಿ, ನಿಧಾನವಾಗಿ ಕೆಳಕ್ಕೆ ಇಳಿಸಬೇಕು.

ರಾಷ್ಟ್ರಧ್ವಜವನ್ನು ಹಾರಿಸಿದ ನಂತರ ಜನಗಣ ಮನವನ್ನು ಹಾಡಲೇಬೇಕು ಹಾಗೂ ರಾಷ್ಟ್ರ ಧ್ವಜವು ನೆಲ ಮುಟ್ಟದಂತೆ ಜಾಗ್ರತೆ ವಹಿಸಬೇಕು. ರಾಷ್ಟ್ರ ತ್ರಿವರ್ಣ ಧ್ವಜವನ್ನು ಹಾರಿಸುವ ಮುನ್ನ ಪರಿಶೀಲಿಸಿಕೊಳ್ಳಬೇಕು. ಹರಿದ ಅಥವಾ ಕೊಳಕಾದ ತ್ರಿವರ್ಣ ಧ್ವಜವನ್ನು ಹಾರಿಸುವಂತಿಲ್ಲ. ಹಾರಿಸಿದ ನಂತರ ಹರಿದಿದ್ದರೆ ಅಂತಹ ಧ್ವಜವನ್ನು ಕೂಡಲೇ ತೆಗೆಯಬೇಕು ಹಾಗೂ ರಾಷ್ಟ್ರಧ್ವಜಕ್ಕೆ ಸಮನಾದ ಅಥವಾ ಎತ್ತರದಲ್ಲಿ ಮತ್ತೊಂದು ಧ್ವಜವನ್ನು ಹಾರಿಸಬಾರದು. ಆ.13 ರಿಂದ 15ರವರೆಗೆ ಧ್ವಜಾರೋಹಣ ನಡೆಸಿ ಇಳಿಸಿದ ಬಳಿಕ ಧ್ವಜವನ್ನು ಜೋಪಾನವಾಗಿ ಮನೆಯಲ್ಲಿ ಇಟ್ಟುಕೊಳ್ಳಬೇಕು.

ಸಾರ್ವಜನಿಕ ಸ್ಥಳದಲ್ಲಿ ಅಥವಾ ಇತರೇ ಸ್ಥಳಗಳಲ್ಲಿ ರಾಷ್ಟ್ರಧ್ವಜವನ್ನು ಸುಡುವುದಾಗಲಿ, ಕೆಡಿಸುವುದಾಗಲಿ, ಕಾಲಡಿಯಲ್ಲಿ ಹಾಕುವುದಾಗಲಿ, ಹಾಳುಗೆಡುವುದಾಗಲಿ ಅಥವಾ ಅದಕ್ಕೆ ಯಾವುದೇ ತರಹದ ಅಗೌರವ ತೋರುವ ರೀತಿಯಲ್ಲಿ ನಡೆದು ಕೊಂಡರೆ ಹಾಗೂ ಮಾತು, ಬರಹ ಅಥವಾ ಇತರ ಕೃತ್ಯದ ಮೂಲಕ ಅಗೌರವ ತೋರಿದರೆ ಮತ್ತು ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡುವುದು ಹಾಗೂ ಧ್ವಜ ಸಂಹಿತೆಯ ನಿಬಂಧನೆಗಳನ್ನು ಉಲ್ಲಂಘಿಸುವ ರೀತಿಯಲ್ಲಿ ಬಳಸುವುದು ಕಂಡುಬಂದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸುವ ಶಿಕ್ಷೆಗೆ ಗುರಿ ಪಡಿಸಲಾಗುತ್ತದೆ.

Leave a Comment

Your email address will not be published. Required fields are marked *