Ad Widget .

ಸುಳ್ಯ: ಅಪಾಯದ ಪರಿಸ್ಥಿತಿಯಲ್ಲಿನ ಮನೆಗಳಿಗೆ ಪರ್ಯಾಯ ವ್ಯವಸ್ಥೆಗೆ ಡಿಸಿ ಚಿಂತನೆ

ಸಮಗ್ರ ನ್ಯೂಸ್: ಪ್ರಾಕೃತಿಕ ವಿಕೋಪಗಳಿಂದ ಹಾನಿಗೊಳಗಾಗಿರುವ ಸುಳ್ಯ ತಾಲೂಕಿನ ಕೆಲವು ಮನೆಗಳಿಗೆ ಪರ್ಯಾಯ ಜಾಗದ ವ್ಯವಸ್ಥೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಂದಾಗಿದ್ದಾರೆ.

Ad Widget . Ad Widget .

‘ತಾಲೂಕಿನ ಕಲ್ಮಕಾರಿನಲ್ಲಿ ಭೂಕುಸಿತದಿಂದ ಅಪಾಯ ಎದುರಿಸುತ್ತಿರುವ ಎಂಟು ಕುಟುಂಬಗಳನ್ನು ಮುಂದಿನ ಮುಂಗಾರಿನ ಒಳಗೆ ಸ್ಥಳಾಂತರಿಸಲಾಗುವುದು. ಈ ಕುಟುಂಬಗಳಿಗೆ ಪರ್ಯಾಯ ಜಮೀನು ನೀಡಲಿದ್ದೇವೆ. ಜಮೀನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದೆ’ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದರು.

Ad Widget . Ad Widget .

ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಡಿಸಿ, ‘ಬೆಳ್ತಂಗಡಿ ತಾಲ್ಲೂಕಿನ ಮಿತ್ತಬಾಗಿಲು ಗಣೇಶನಗರದಲ್ಲೂ ಕೆಲವು ಮನೆಗಳು ಭೂಕುಸಿತದ ಅಪಾಯವನ್ನು ಎದುರಿಸುತ್ತಿವೆ. ಈ ಕುಟುಂಬಗಳು ಮನೆ ಕಟ್ಟಿಕೊಳ್ಳುವುದಕ್ಕೆ ಪರ್ಯಾಯ ಜಮೀನು ನೀಡಲು ಜಾಗ ಗುರುತಿಸುವಂತೆ ಅಲ್ಲಿನ ಗ್ರಾಮ ಪಂಚಾಯಿತಿಗೆ ಸೂಚನೆ ನೀಡಿದ್ದೇವೆ’ ಎಂದರು.

‘ಸುಳ್ಯ ತಾಲ್ಲೂಕಿನ ಕೊಲ್ಲಮೊಗ್ರು ಹಾಗೂ ಕಲ್ಮಕಾರುವಿನಲ್ಲಿ ಇತ್ತೀಚೆಗೆ ನಡೆದ ಭೂಕುಸಿತದ ಬಗ್ಗೆ ಅಧ್ಯಯನ ನಡೆಸುವಂತೆ ಸುರತ್ಕಲ್ ಎನ್‌ಐಟಿಕೆ, ಕರ್ನಾಟಕ ಪ್ರಾಕೃತಿಕ ವಿಕೋಪ ನಿಗಾ ಕೇಂದ್ರ ಹಾಗೂ ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ಇಲಾಖೆಗಳ (ಜಿಎಸ್‌ಐ) ತಜ್ಞರನ್ನು ಕೋರಿದ್ದೇವೆ’ ಎಂದರು.

‘ಜಿಲ್ಲೆಯಲ್ಲಿ ಭೂಕುಸಿತದ ಅಪಾಯ ಎದುರಿಸುತ್ತಿರುವ ಪ್ರದೇಶಗಳನ್ನು ಗುರುತಿಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ) ಮತ್ತು ಗ್ರಾಮ ಲೆಕ್ಕಿಗರಿಗೆ ನಿರ್ದೇಶನ ನೀಡಿದ್ದೇನೆ. ಗುಡ್ಡವನ್ನು 3 ಅಡಿಗಳಿಗಿಂತ ಎತ್ತರ ಅಥವಾ 1 ಮೀಟರ್‌ಗಿಂತ ಹೆಚ್ಚು ಎತ್ತರಕ್ಕೆ ಕಡಿದು ನೆಲವನ್ನು ಸಮತಟ್ಟುಗೊಳಿಸುವುದಕ್ಕೆ ಕಂದಾಯ ಇಲಾಖೆಯಿಂದ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು ಎಂದೂ ಸೂಚನೆ ನೀಡಿದ್ದೇನೆ’ ಎಂದು ಅವರು ತಿಳಿಸಿದರು.

‘1857ರಲ್ಲಿ ನಡೆದ ದೇಶದ ಮೊದಲ ಸ್ವಾತಂತ್ರ್ಯ ಸಂಗ್ರಾಮಕ್ಕೂ ಮೊದಲೇ 1837ರಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ್ದ ಕೆದಂಬಾಡಿ ರಾಮೇಗೌಡ ಅವರ ಕಂಚಿನ ಪ್ರತಿಮೆಯನ್ನು ಬಾವುಟ ಗುಡ್ಡೆಯ ಟ್ಯಾಗೋರ್ ಉದ್ಯಾನದಲ್ಲಿ ಸ್ಥಾಪಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ’ ಎಂದು ಜಿಲ್ಲಾಧಿಕಾರಿ ತಿಳಿಸಿದರು.

Leave a Comment

Your email address will not be published. Required fields are marked *