Ad Widget .

ಭೀಕರ ರಸ್ತೆ ಅಪಘಾತ ಮಹಾರಾಷ್ಟ್ರದ ಮಾಜಿ ಸಚಿವ ನಿಧನ

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಶಿವಸಂಗ್ರಾಮ್ ಮುಖ್ಯಸ್ಥ ಹಾಗೂ ಮಾಜಿ ಸಚಿವ ವಿನಾಯಕ್ ಮೇಟೆ ಮೃತಪಟ್ಟಿದ್ದಾರೆ.

Ad Widget . Ad Widget .

ರವಿವಾರ ಮುಂಜಾನೆ ಮಡಪ್ ಸುರಂಗದ ಬಳಿ ಕಾರು ಅಪಘಾತಗೊಂಡಿದ್ದು ಕಾರಿನಲ್ಲಿದ್ದ ಮಾಜಿ ಸಚಿವ ಸೇರಿ ಭದ್ರತಾ ಸಿಬ್ಬಂದಿಗಳೂ ಗಾಯಗೊಂಡಿದ್ದಾರೆ. ವಿನಾಯಕ್ ಅವರಿಗೆ ತಲೆ , ಕೈ, ಕಾಲು ಸೇರಿದಂತೆ ಹಲವೆಡೆ ತೀವ್ರ ಗಾಯಗೊಂಡ ಹಿನ್ನೆಲೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.

Ad Widget . Ad Widget .

ನಿಧನರಾದ ವಿನಾಯಕ್ ಅವರು ಮರಾಠ ಮೀಸಲಾತಿ ವಿಚಾರಕ್ಕೆ ಸಂಬಂಧಪಟ್ಟಂತೆ ಚರ್ಚಿಸಲು ಮುಂಬೈಗೆ ಪ್ರಯಾಣ ಬೆಳೆಸಿದ್ದರು ಎನ್ನಲಾಗಿದೆ. ವಿನಾಯಕ್ ಅವರ ಜೊತೆ ಪ್ರಯಾಣ ಬೆಳೆಸಿದ ಮತ್ತಿಬ್ಬರು ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆದಿದ್ದಾರೆ ಎನ್ನಲಾಗಿದೆ.

ಶಿವ ಸಂಗ್ರಾಮ್ ಪಕ್ಷದ ಮುಖ್ಯಸ್ಥ ಹಾಗೂ ಮಾಜಿ ಸಚಿವರಾದ ವಿನಾಯಕ್ ಮೇಟೆ ಅವರಿಗೆ ಅಪಘಾತವಾಗಿರುವ ವಿಚಾರ ತಿಳಿಯುತ್ತಿದ್ದಂತೆ ಸಿಎಂ ಏಕನಾಥ್ ಸಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಪಡ್ನವಿಸ್ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಆಸ್ಪತ್ರೆಗೆ ಬಂದಿದ್ದರು.

Leave a Comment

Your email address will not be published. Required fields are marked *