Ad Widget .

ಕಾರು ಮತ್ತು ಟೆಂಪೋ ಅಪಘಾತ; 6 ಮಂದಿ ಸಾವು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ರವಿವಾರ ಬೆಳಿಗ್ಗೆ ಕಾರು ಹಾಗೂ ಟೆಂಪೋ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget . Ad Widget .

ಮಂಜರಸುಂಬ-ಪಟೋಡ ಹೆದ್ದಾರಿಯಲ್ಲಿ ಮುಂಜಾನೆ 5.30ರ ಸುಮಾರಿಗೆ ಅಪಘಾತ ಸಂಭವಿಸಿದೆ.

Ad Widget . Ad Widget .

ಪ್ರಾಥಮಿಕ ಮಾಹಿತಿಯ ಪ್ರಕಾರ, ಕೇಜ್ ತಹಸಿಲ್‌ನ ಜಿವಾಚಿವಾಡಿ ಗ್ರಾಮದ ಕುಟುಂಬವೊಂದು ಮದುವೆ ಸಮಾರಂಭದಲ್ಲಿ ಭಾಗವಹಿಸಲು ಪುಣೆಗೆ ಕಾರಿನಲ್ಲಿ ಹೋಗುತ್ತಿದ್ದಾಗ ಅವರ ವಾಹನ ಹಾಗೂ ಟೆಂಪೋ ಪರಸ್ಪರ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕುಟುಂಬದ ಐವರು ಹಾಗೂ ಇನ್ನೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಎರಡು ವಾಹನಗಳನ್ನು ಬೇರ್ಪಡಿಸಲು ಪೊಲೀಸರು ಕ್ರೇನ್ ಬಳಸಬೇಕಾಯಿತು ಎಂದು ಅವರು ಹೇಳಿದರು.

ಮೃತಪಟ್ಟವರನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *