Ad Widget .

ಬಿಲಿಯನೇರ್ ಉದ್ಯಮಿ ಷೇರು ಮಾರುಕಟ್ಟೆಯ ದಿಗ್ಗಜ ಅಸ್ತಂಗತ

ಶೇರು ಮಾರುಕಟ್ಟೆಯ ಅತೀ ದೊಡ್ಡ ಹೆಸರು, ಬಿಲಿಯನೇರ್ ಉದ್ಯಮಿ ರಾಕೇಶ್ ಜುಂಜುನ್‌ವಾಲಾ ಭಾನುವಾರ ಬೆಳಿಗ್ಗೆ ನಿಧನರಾದರು.

Ad Widget . Ad Widget .

ಬಿಲಿಯನೇರ್ ಉದ್ಯಮಿ, ಷೇರು ವ್ಯಾಪಾರಿ ಮತ್ತು ಹೂಡಿಕೆದಾರ ರಾಕೇಶ್​ ಜುಂಜುನ್​ವಾಲಾ (62) ಅವರು ಹೃದಯಾಘಾತದಿಂದ ಭಾನುವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

Ad Widget . Ad Widget .

ಮುಂಬೈನ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯಲ್ಲಿ ಬೆಳಗ್ಗೆ 6.45ರ ಸುಮಾರಿಗೆ ವಿಧಿವಶರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶೇರು ಮಾರುಕಟ್ಟೆಯ ತನ್ನ ಹಿಡಿತದ ಕಾರಣದಿಂದ ರಾಕೇಶ್ ಜುಂಜುನ್ ವಾಲಾ ಅವರನ್ನು “ಬಿಗ್ ಬುಲ್ ಆಫ್ ಇಂಡಿಯಾ” ಮತ್ತು “ಕಿಂಗ್ ಆಫ್ ಬುಲ್ ಮಾರ್ಕೆಟ್” ಎಂದು ಕರೆಯಲಾಗುತ್ತದೆ.

ಇತ್ತೀಚೆಗಷ್ಟೇ ಅವರು ಆಕಾಶ ಏರ್ ಎಂಬ ವಿಮಾನಯಾನ ಸಂಸ್ಥೆಯನ್ನು ಆರಂಭಿಸಿದ್ದರು. ಆಗಸ್ಟ್ 7ರಂದು ಇದರ ಮೊದಲ ಹಾರಾಟ ನಡೆದಿತ್ತು. , 1985ರಲ್ಲಿ ಶೇರು ಮಾರುಕಟ್ಟೆಗೆ ಕಾಲಿಟ್ಟರು. 5000 ರೂ ನಿಂದ ವಹಿವಾಟು ಆರಂಭಿಸಿದ್ದ ರಾಕೇಶ್ 11 ಸಾವಿರ ಕೋಟಿ ರೂ. ವಹಿವಾಟು ನಡೆಸುವಷ್ಟು ಬೆಳೆದಿದ್ದರು.

ಸಕ್ರಿಯ ಹೂಡಿಕೆದಾರರಾಗಿರುವ ಜುಂಜುನ್‌ವಾಲಾ ಅವರು ಆಪ್ಟೆಕ್ ಲಿಮಿಟೆಡ್ ಮತ್ತು ಹಂಗಾಮಾ ಡಿಜಿಟಲ್ ಮೀಡಿಯಾ ಎಂಟರ್‌ಟೈನ್‌ಮೆಂಟ್ ಪ್ರೈವೇಟ್‌ ನ ಅಧ್ಯಕ್ಷರಾಗಿದ್ದಾರೆ. ಲಿಮಿಟೆಡ್ ಮತ್ತು ಪ್ರೈಮ್ ಫೋಕಸ್ ಲಿಮಿಟೆಡ್, ಜಿಯೋಜಿತ್ ಫೈನಾನ್ಷಿಯಲ್ ಸರ್ವಿಸಸ್, ಬಿಲ್ಕೇರ್ ಲಿಮಿಟೆಡ್, ಪ್ರಜ್ ಇಂಡಸ್ಟ್ರೀಸ್ ಲಿಮಿಟೆಡ್, ಪ್ರೊವೊಗ್ ಇಂಡಿಯಾ ಲಿಮಿಟೆಡ್, ಕಾನ್ಕಾರ್ಡ್ ಬಯೋಟೆಕ್ ಲಿಮಿಟೆಡ್, ಇನ್ನೋವಸಿಂತ್ ಟೆಕ್ನಾಲಜೀಸ್ ಲಿಮಿಟೆಡ್, ಮಿಡ್ ಡೇ ಮಲ್ಟಿಮೀಡಿಯಾ ಕಂಪನಿ ಲಿಮಿಟೆಡ್, ನಾಗಾರ್ಜುನಾ ಕಂಪನಿ ಲಿಮಿಟೆಡ್‌, ವೈಸರಾಯ್ ಹೋಟೆಲ್ಸ್ ಲಿಮಿಟೆಡ್ ಮತ್ತು ಟಾಪ್ಸ್ ಸೆಕ್ಯುರಿಟಿ ಲಿಮಿಟೆಡ್ ನ ನಿರ್ದೇಶಕರ ಮಂಡಳಿಯಲ್ಲಿದ್ದರು.

Leave a Comment

Your email address will not be published. Required fields are marked *