Ad Widget .

ಗೃಹ ಸಚಿವರ ಬೆಂಗಾವಲು ವಾಹನ ಅಪಘಾತ!

ಗೃಹ ಸಚಿವ ಆರಗ ಜ್ಞಾನೇಂದ್ರರ ಬೆಂಗಾವಲು ವಾಹನ ಅಪಘಾತವಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಜಂಕ್ಷನ್​​ನಲ್ಲಿ ಬೆಂಗಾವಲು ಜೀಪಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.

Ad Widget . Ad Widget .

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಜಂಕ್ಷನ್ ಬಳಿಯಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಬೆಂಗಾವಲು ವಾಹನಕ್ಕೆ, ಮತ್ತೊಂದು ಕಾರು ಡಿಕ್ಕಿಯಾಗಿದೆ. ಈ ಪರಿಣಾಮ, ಬೆಂಗಾವಲು ವಾಹನ ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Ad Widget . Ad Widget .

ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ತುಮಕೂರಿನಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದರು. ಈ ವೇಳೆಯಲ್ಲಿ ಎದುರುಗಡೆ ಬರುತ್ತಿದ್ದಂತ ಕಾರೊಂದು ಅವರ ಬೆಂಗಾವಲು ವಾಹನಕ್ಕೆ ಡಿಕ್ಕಿಯಾಗಿದೆ. ಕಾರಿಗೆ ಡ್ಯಾಮೇಜ್ ಆಗಿದ್ದು, ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ.

ಡಿಕ್ಕಿ ಹೊಡೆದ ಕಾರು ಬೆಂಗಳೂರು ಮಾರ್ಗವಾಗಿ ತೆರಳುತ್ತಿತ್ತು ಎನ್ನಲಾಗಿದೆ. ಅದೃಷ್ಟವಶಾತ್​ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಜೀಪು ಅಪಘಾತಕ್ಕೊಳಗಾಗಿದೆ. ಅಪಘಾತದ ರಭಸಕ್ಕೆ ನೀಲಿ ಬಣ್ಣದ ಬೆಂಗಾವಲು ಜೀಪಿನ ಮುಂಭಾಗ ಭಾಗಶಃ ನುಜ್ಜು ಗುಜ್ಜಾಗಿದೆ.

Leave a Comment

Your email address will not be published. Required fields are marked *