Ad Widget .

ಲಾರಿ ಮತ್ತು ಬೈಕ್ ಅಪಘಾತ; ಬೈಕ್ ಸವಾರ ಸಾವು

ಹುಬ್ಬಳ್ಳಿ: ರಸ್ತೆಬದಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಹುಡಾ ಮಾಜಿ ಅಧ್ಯಕ್ಷ ನಾಗೇಶ ಕಲಬುರ್ಗಿ ಪುತ್ರ ಸಾವನ್ನಪ್ಪಿದ ಘಟನೆಯೊಂದು ಹುಬ್ಬಳ್ಳಿಯ ತಾರಿಹಾಳ ಬೈಪಾಸ್ ಮೈಕ್ರೋಫಿನಿಶ್ ಫ್ಯಾಕ್ಟರಿ ಬಳಿ ತಡರಾತ್ರಿ ನಡೆದಿದೆ.

Ad Widget . Ad Widget .

ಹುಡಾ ಮಾಜಿ ಅಧ್ಯಕ್ಷ ನಾಗೇಶ ಕಲಬುರ್ಗಿ ಅವರ ಪುತ್ರ ತಿಲಕ ಕಲಬುರ್ಗಿ (22) ಮೃತ ದುರ್ದೈವಿ.

Ad Widget . Ad Widget .

ನುಗ್ಗಿಕೇರಿ ಹನುಮಾನ್ ದೇವಸ್ಥಾನಕ್ಕೆ ಹೋಗಿ ವಾಪಸ್ ಬರುವ ವೇಳೆ ಈ ಅವಘಡ ಸಂಭವಿಸಿದೆ.

ತಿಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆತನ ಸ್ನೇಹಿತನಿಗೆ ಗಂಭೀರ ಗಾಯಗಳಾಗಿವೆ.

ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *