Ad Widget .

75 ವರ್ಷಗಳಲ್ಲಿ ದೇಶ ಹಲವು ಸವಾಲುಗಳನ್ನು ಮೆಟ್ಟಿನಿಂತಿದೆ – ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ಭಾರತ ಪ್ರಜಾಪ್ರಭುತ್ವದ ತಾಯಿ. ಭಾರತ ತನ್ನ 75 ವರ್ಷಗಳ ಪ್ರಯಾಣದಲ್ಲಿ ಅಮೂಲ್ಯವಾದ ಸಾಮರ್ಥ್ಯವನ್ನು ಹೊಂದಿದ್ದು, ಅನೇಕ ಸವಾಲುಗಳನ್ನು ಎದುರಿಸಿ ತನ್ನ ಸಾಮರ್ಥ್ಯ ಸಾಬೀತುಪಡಿಸಿದೆ ಎಂದು ಕೆಂಪುಕೋಟೆ ಭಾಷಣದಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ.

Ad Widget . Ad Widget .

ಸತತ 9ನೇ ಬಾರಿಗೆ ಕೆಂಪುಕೋಟೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ರಾಷ್ಟ್ರದ ಜನತೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಈ ಸ್ವಾತಂತ್ರ್ಯ ದಿನದಂದು ನಾನು ಎಲ್ಲಾ ಭಾರತೀಯರು ಮತ್ತು ಭಾರತವನ್ನು ಪ್ರೀತಿಸುವವರನ್ನು ಅಭಿನಂದಿಸುತ್ತೇನೆ. ಹೊಸ ಸಂಕಲ್ಪದೊಂದಿಗೆ, ಹೊಸ ದಿಕ್ಕಿನತ್ತ ಹೆಜ್ಜೆ ಹಾಕುವ ದಿನವಿದು. ಭಾರತ ಪ್ರಜಾಪ್ರಭುತ್ವದ ತಾಯಿ. ಭಾರತ ತನ್ನ 75 ವರ್ಷಗಳ ಪ್ರಯಾಣದಲ್ಲಿ ಅಮೂಲ್ಯವಾದ ಸಾಮರ್ಥ್ಯವನ್ನು ಹೊಂದಿದ್ದು, ಅನೇಕ ಸವಾಲುಗಳನ್ನು ಎದುರಿಸಿ ತನ್ನ ಸಾಮರ್ಥ್ಯ ಸಾಬೀತುಪಡಿಸಿದೆ ಎಂದು ಹೇಳಿದರು.

Ad Widget . Ad Widget .

‘ಆಜಾದಿ ಮಹೋತ್ಸವ’ದ ಸಂದರ್ಭದಲ್ಲಿ ನಾವು ನಮ್ಮ ಅನೇಕ ರಾಷ್ಟ್ರನಾಯಕರನ್ನು ಸ್ಮರಿಸಿದ್ದೇವೆ. ಆಗಸ್ಟ್ 14 ರಂದು, ನಾವು ವಿಭಜನೆಯ ಭೀಕರತೆಯನ್ನು ನೆನಪಿಸಿಕೊಂಡಿದ್ದೇವೆ. ಕಳೆದ 75 ವರ್ಷಗಳಲ್ಲಿ ನಮ್ಮ ದೇಶವನ್ನು ಮುನ್ನಡೆಸಲು ಕೊಡುಗೆ ನೀಡಿದ ದೇಶದ ಎಲ್ಲಾ ನಾಗರಿಕರನ್ನು ಇಂದು ನೆನಪಿಸಿಕೊಳ್ಳುವ ದಿನವಾಗಿದೆ.

ಅಂತೆಯೇ ‘ಭಾರತ ಪ್ರಜಾಪ್ರಭುತ್ವದ ತಾಯಿ. ಭಾರತ ತನ್ನ 75 ವರ್ಷಗಳ ಪ್ರಯಾಣದಲ್ಲಿ ಅಮೂಲ್ಯವಾದ ಸಾಮರ್ಥ್ಯವನ್ನು ಹೊಂದಿದೆ ಮತ್ತು ಅನೇಕ ಸವಾಲುಗಳನ್ನು ಎದುರಿಸಿ ತನ್ನ ಸಾಮರ್ಥ್ಯ ಸಾಬೀತುಪಡಿಸಿದೆ. ನಮ್ಮ ದೇಶದ ಜನರು ಅನೇಕ ತ್ಯಾಗವನ್ನು ಮಾಡಿದರು. ಆದರೆ ಅವರು ಎಂದೂ ತಮ್ಮ ಸಂಕಲ್ಪ ಬಿಡಲಿಲ್ಲ ಮತ್ತು ಅವರ ಸಂಕಲ್ಪಗಳ ಕಾರ್ಯಸಾಧನೆಗೆ ನಿರಂತರವಾಗಿ ಶ್ರಮಿಸಿದರು ಎಂದು ಮೋದಿ ಅಭಿಪ್ರಾಯಪಟ್ಟರು.

Leave a Comment

Your email address will not be published. Required fields are marked *