Ad Widget .

ಕುಟುಂಬಸ್ಥರ ಒತ್ತಡಕ್ಕೆ ಗೆಲುವು| ಪ್ರವೀಣ್ ಕುಮಾರ್ ಬಿಡುಗಡೆ ಸಾಧ್ಯತೆ ಕಡಿಮೆ

ಸಮಗ್ರ ನ್ಯೂಸ್: ಚಿನ್ನಕ್ಕಾಗಿ ನಾಲ್ವರು ಸಂಬಂಧಿಕರನ್ನೇ ಹತ್ಯೆ ಮಾಡಿ ಜೈಲಿನಲ್ಲಿರುವ ಪ್ರವೀಣ್‌ ಕುಮಾರ್‌ ಬಿಡುಗಡೆಯಾಗುವ ಸಾಧ್ಯತೆ ಕಡಿಮೆ ಎಂದು ತಿಳಿದು ಬಂದಿದೆ.

Ad Widget . Ad Widget .

ಜೈಲಿನಲ್ಲಿ ಸನ್ನಡತೆಯ ಆಧಾರದಲ್ಲಿ ಸ್ವಾತಂತ್ರ್ಯೋತ್ಸವ ಸಂದರ್ಭ ಬಿಡುಗಡೆಯಾಗುವ ಕೈದಿಗಳಲ್ಲಿ ಪ್ರವೀಣ್‌ ಕುಮಾರ್‌ ಕೂಡ ಇದ್ದು ಬಿಡುಗಡೆಗೆ ಮುನ್ನ ಆತನ ಬಗ್ಗೆ ವರದಿ ನೀಡುವಂತೆ ಕಾರಾಗೃಹ ಇಲಾಖೆ ದ.ಕ.ಜಿಲ್ಲಾ ಪೊಲೀಸರಿಂದ ವರದಿ ಕೇಳಿತ್ತು. ಅದರಂತೆ ಕುಟುಂಬಸ್ಥರ ಹೇಳಿಕೆ ಪಡೆದುಕೊಳ್ಳಲಾಗಿತ್ತು. ಪ್ರವೀಣ್‌ನನ್ನು ಬಿಡುಗಡೆ ಮಾಡಬಾರದು, ಬಿಡುಗಡೆ ಮಾಡಿದರೆ ಕುಟುಂಬಕ್ಕೆ ಜೀವ ಭಯವಿದೆ. ಸಮಾಜಕ್ಕೆ ತಪ್ಪು ಸಂದೇಶ ಹೋಗುತ್ತದೆ ಎಂದು ಪತ್ನಿ ಸೇರಿದಂತೆ ಕುಟುಂಬಸ್ಥರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಹೇಳಿಕೆ ನೀಡಿದ್ದರು.

Ad Widget . Ad Widget .

ಜನಪ್ರತಿನಿಧಿಗಳು, ವಿವಿಧ ಸ್ತರದ ಅಧಿಕಾರಿಗಳಿಗೂ ಮನವಿ ಸಲ್ಲಿಸಿದ್ದರು. ಈ ಬಗ್ಗೆ ದ.ಕ. ಜಿಲ್ಲಾ ಎಸ್‌ಪಿ ಹೃಷಿಕೇಶ್‌ ಸೋನಾವಣೆ ಪ್ರತಿಕ್ರಿಯಿಸಿ, “ಕುಟುಂಬಸ್ಥರ ಆಕ್ಷೇಪದ ಹಿನ್ನೆಲೆಯಲ್ಲಿ ಪ್ರವೀಣ್‌ನನ್ನು ಬಿಡುಗಡೆ ಮಾಡಬಾರದು ಎಂಬುದಾಗಿ ಇಲಾಖೆಗೆ ವರದಿ ನೀಡಿದ್ದೇವೆ. ಹಾಗಾಗಿ ಬಿಡುಗಡೆ ಸಾಧ್ಯತೆ ಕಡಿಮೆ’ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *