ಶಿವಮೊಗ್ಗದಲ್ಲಿ ಭುಗಿಲೆದ್ದ ಪ್ಲೆಕ್ಸ್ ತೆರವು ವಿವಾದ।ಹಿಂದೂ ಯುವಕನಿಗೆ ಚೂರಿ ಇರಿತ

ಸಮಗ್ರ ನ್ಯೂಸ್: ಶಿವಮೊಗ್ಗ ನಗರದಲ್ಲಿ ಸಾವರ್ಕರ್ ಫ್ಲೆಕ್ಸ್ ತೆರವು ವಿವಾದ ಭುಗಿಲೆದ್ದಿದೆ. ಈ ಕಾರಣದಿಂದಾಗಿಯೇ ಇಂದಿನಿಂದ ಮೂರು ದಿನ ನಗರದಾಧ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

Ad Widget ... ..

ಮತ್ತೊಂದೆಡೆ ನಗರದ ಉಪ್ಪಾರಕೇರಿಯಲ್ಲಿ 20 ವರ್ಷದ ಪ್ರೇಮ್ ಸಿಂಗ್ ಎಂಬಾತನಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿಯಲಾಗಿದೆ. ಅವರನ್ನು ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಯುವಕನಿಗೆ ಚೂರಿ ಇರಿದು ಬೈಕ್ ಬಿಟ್ಟು ಪರಾರಿಯಾಗಿದ್ದಾರೆ.

Ad Widget

ಇರಿತಕ್ಕೊಳಗಾದ ಯುವಕನನ್ನು ಪ್ರೇಮ್ ಸಿಂಗ್ ಎಂದು ಗುರುತಿಸಲಾಗಿದೆ. ಪ್ರೇಮ್ ಮನೆ ಮುಂದೆ ನಿಂತಿದ್ದು, ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಚೂರಿಯಿಂದ ಇರಿದಿದ್ದಾರೆ. ಯುವಕನ್ನು ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Leave a Comment

Your email address will not be published. Required fields are marked *