Ad Widget .

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಅಸಲಿ ಕಾರಣವೇ ಬೇರೆ| ಎನ್ಐಎ ತನಿಖೆಯಿಂದ ಹೊರಬಿತ್ತು ಶಾಕಿಂಗ್ ಸತ್ಯ!

ಸಮಗ್ರ ನ್ಯೂಸ್: ಇಡೀ ದೇಶದಲ್ಲಿ ಸುದ್ದಿ ಮಾಡಿದ್ದ ದ.ಕ ಜಿಲ್ಲೆಯ ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಲಿ ಕಾರಣ ಏನೆಂಬುದು ಹೊರಗೆ ಬಿದ್ದಿದೆ. ಎನ್‌ಐಎ ಅಧಿಕಾರಿಗಳ ತನಿಖೆ ವೇಳೆ ಬೆಳಕಿಗೆ ಬಂದ ಅಂಶಗಳು ನಿಜಕ್ಕೂ ಅಚ್ಚರಿಯುಂಟು ಮಾಡಿವೆ.

Ad Widget . Ad Widget .

ಎನ್‌ಐಎ ಎಫ್‌ಐಆರ್ ನಲ್ಲಿದೆ ಆ ಸಿಕ್ರೇಟ್!
ಎನ್ಐಎ ತನಿಖೆಯಿಂದ ಆ ಸೀಕ್ರೆಟ್ ಅಂಶ ಹೊರಬಿದ್ದಿದೆ. ಸ್ಥಳೀಯ ಜನರಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದ ಈ ಕೃತ್ಯಕ್ಕೆ ಸಂಚು ಹಾಕಲಾಗಿತ್ತು. ಆ ಉದ್ದೇಶದಿಂದ ಪ್ರವೀಣ್ ನೆಟ್ಟಾರು ಕೊಲೆಗೆ ಆರೋಪಿಗಳು ಸಂಚು ರೂಪಿಸಿದ್ದರು.

Ad Widget . Ad Widget .

ಪ್ರವೀಣ್ ನೆಟ್ಟಾರು ಕೊಲೆ ಸಂಬಂಧ ಎನ್‌ಐಎ ಎಫ್‌ಐಆರ್ ದಾಖಲಿಸಿದೆ. ನಾಲ್ವರು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಝಾಕೀರ್, ಮಹಮ್ಮದ್ ಶಫೀಕ್, ಶೇಕ್ ಸದ್ದಾಂ ಮತ್ತು ಅಬ್ದುಲ್ ಹ್ಯಾರಿಸ್ ಮೇಲೆ ಎಫ್‌ಐಆರ್ ದಾಖಲಾಗಿದೆ. ಐಪಿಸಿ 120ಬಿ, 302, 34 ಹಾಗೂ ಯುಎಪಿಎ ಕಲಂ 16 ಮತ್ತು18 ರಡಿ ಎಫ್‌ಐಆರ್ ದಾಖಲಾಗಿದೆ. ಪ್ರವೀಣ್ ನೆಟ್ಟಾರು ಆರೋಪಿಗಳ ವಿರುದ್ಧ ಯುಎಪಿಎ ಕಲಂ ಅಡಿಯಲ್ಲಿ ಕೇಸ್ ದಾಖಲಾಗಿದೆ.

ಈಗಾಗಲೇ ಬೆಳ್ಳಾರೆ ಪೊಲೀಸ್ ಠಾಣೆ ಕೇಸ್ ಫೈಲ್ ಪಡೆದು ಎನ್‌ಐಎ ತನಿಖೆ ಕೈಗೊಂಡಿದೆ. ಬೆಳ್ಳಾರೆ ಠಾಣೆಯಲ್ಲಿ ದಾಖಲಾದ ಕೇಸ್ ವಿವರಗಳು ಎನ್‌ಐಎ ಎಫ್‌ಐಆರ್ ನಲ್ಲಿ ಉಲ್ಲೇಖಿಸಲಾಗಿದೆ. ಅದರ ಜೊತೆಗೆ ಹತ್ಯೆ ಹಿಂದಿನ ಉದ್ದೇಶ ಏನು ಎಂಬುದು ಉಲ್ಲೇಖಿಸಿದೆ. ತನಿಖಾ ಸಮಯದಲ್ಲಿ ಬೆಳಕಿಗೆ ಬಂದ ಸೀಕ್ರೇಟ್ ಎನ್‌ಐಎ ಎಫ್‌ಐಆರ್ ನಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಈ ಬಗ್ಗೆ ಹೆಚ್ಚಿನ ಎನ್‌ಐಎ ತಂಡ ತನಿಖೆ ಕೈಗೊಂಡಿದೆ.

ಈ ನಡುವೆ ಸುಳ್ಯ ಕೋರ್ಟ್ ಆರೋಪಿಗಳನ್ನು ಆಗಸ್ಟ್ 24 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ,

ಆರೋಪಿಗಳನ್ನು ವಶಕ್ಕೆ ಪಡೆಯುವುದಕ್ಕೆ ಎನ್.ಐ.ಎ ಅಧಿಕಾರಿಗಳಿಂದಲೂ ಸಿದ್ದತೆ ನಡೆಸಿದ್ದು, ಕೋರ್ಟ್ ಗೆ ಅರ್ಜಿ‌ ಸಲ್ಲಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆ ಇದೆ.

Leave a Comment

Your email address will not be published. Required fields are marked *