ಶಿವಮೊಗ್ಗ ನಗರದಲ್ಲಿ ಸಂಚಾರ ನಿಯಮಗಳಲ್ಲಿ ಬದಲಾವಣೆ| ಬೈಕ್ ಹಿಂಬದಿ ಸವಾರರಿಗೆ ನಿರ್ಬಂಧ

ಸಮಗ್ರ ನ್ಯೂಸ್: ವೀರ ಸಾವರ್ಕರ್‌ ಫೊಟೋ ಅಳವಡಿಸುವ ವಿವಾದದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಆ. 15 ರ ಮದ್ಯಾಹ್ನ 3 ಗಂಟೆಯಿಂದ ಆ. 18 ರಂದು ರಾತ್ರಿ 10 ಗಂಟೆಯವರೆಗೆ ಈ ಕೆಳಕಂಡ ನಿಭಂದನೆಗಳನ್ನು ವಿಧಿಸಿ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಲಾಗಿರುತ್ತದೆ.

Ad Widget ... ..

5 ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ನಿರ್ಬಂಧಿಸಿದೆ.

Ad Widget

ಯಾವುದೇ ಮೆರವಣಿಗೆ, ಸಭೆ, ಸಮಾರಂಭ ಮತ್ತು ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ ಸಮಾವೇಶಗಳನ್ನು ನಿಷೇದಿಸಲಾಗಿದೆ.

ಯಾವುದೇ ರೀತಿ ಆಯುಧ ಹಾಗೂ ಮಾರಕಾಸ್ತ್ರಗಳನ್ನು ಹಾಗೂ ಸ್ಪೋಟಕಗಳನ್ನು ತೆಗೆದುಕೊಂಡು ಹೋಗುವುದು ಮತ್ತು ಸಂಗ್ರಹಿಸುವುದು ನಿಷೇಧಿಸಲಾಗಿದೆ.

ವ್ಯಕ್ತಿ /ಶವಗಳ ಪ್ರತಿಕೃತಿಗಳನ್ನು ಪ್ರದರ್ಶನ /ದಹನ ಮಾಡುವುದು ಮತ್ತು ಪ್ರಚೋದನಕಾರಿ ಘೋಷಣೆ ಹಾಗೂ ಭಿತ್ತಿಚಿತ್ರಗಳನ್ನು ತೋರಿಸುವುದು ನಿಷೇಧಿಸಲಾಗಿದೆ.

ದ್ವಿಚಕ್ರ ವಾಹನ ಸವಾರರು ಹಿಂಬದಿಯಲ್ಲಿ 40 ವರ್ಷಕ್ಕಿಂತ ಕಿರಿಯ ವಯಸ್ಸಿನ ಗಂಡಸರನ್ನು ಕೂರಿಸಿಕೊಂಡು ಹೋಗುವುದನ್ನು ನಿಷೇದಿಸಲಾಗಿದೆ.

ತುರ್ತು ಸಂದರ್ಭ ಹೊರತುಪಡಿಸಿ ರಾತ್ರಿ 9 ಗಂಟೆಯಿಂದ ಬೆಳಗಿನ ಜಾವ 5 ಗಂಟೆವರೆಗೆ ದ್ವಿಚಕ್ರ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

Leave a Comment

Your email address will not be published. Required fields are marked *