Ad Widget .

ತೈಲ ಟ್ಯಾಂಕರ್ ಮತ್ತು ಬಸ್ ನಡುವೆ ಡಿಕ್ಕಿ| 20 ಪ್ರಯಾಣಿಕರು ಸಜೀವ ದಹನ

ಸಮಗ್ರ ನ್ಯೂಸ್: ಪ್ರಯಾಣಿಕರನ್ನು ಹೇರಿದ್ದ ಬಸ್ ಮತ್ತು ತೈಲ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 20 ಜನರು ಸಜೀವ ದಹನವಾಗಿರುವ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ.

Ad Widget . Ad Widget .

ಲಾಹೋರ್‌ನಿಂದ ಸುಮಾರು 350 ಕಿ.ಮೀ ದೂರದಲ್ಲಿರುವ ಮುಲ್ತಾನ್‌ನಲ್ಲಿ ಅಪಘಾತ ಸಂಭವಿಸಿದೆ. ಅಪಘಾತದಿಂದ ಹಲವು ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಅತಿ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

Ad Widget . Ad Widget .

ಲಾಹೋರ್‌ನಿಂದ ಕರಾಚಿಗೆ ಹೋಗುತ್ತಿದ್ದ ಬಸ್ ಮತ್ತು ತೈಲ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿದ್ದು, 20 ಜನರು ಮೃತಪಟ್ಟಿದ್ದಾರೆ. ಡಿಕ್ಕಿಯ ನಂತರ ಬಸ್ ಮತ್ತು ಟ್ಯಾಂಕರ್ ಎರಡೂ ಹೊತ್ತಿ ಉರಿದ ಹಿನ್ನೆಲೆ ಪ್ರಯಾಣಿಕರು ವಾಹನದಿಂದ ಹೊರ ಬರದೇ ಸಜೀವ ದಹನವಾಗಿದ್ದಾರೆ ಎಂದು ತಿಳಿದುಬಂದಿದೆ.

ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಆರು ಜನರನ್ನು ಮುಲ್ತಾನ್‌ನ ನಿಶ್ತಾರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿಯೂ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಸಾವಿಗೀಡಾದ ಪ್ರಯಾಣಿಕರ ಹೆಚ್ಚಿನ ದೇಹಗಳು ಸಂಪೂರ್ಣವಾಗಿ ಮತ್ತು ಗುರುತಿಸಲಾಗದಷ್ಟು ಸುಟ್ಟು ಕರಕಲಾಗಿವೆ. ಈ ದೇಹಗಳನ್ನು ಡಿಎನ್‌ಎ ಪರೀಕ್ಷೆಯ ನಂತರ ಕುಟುಂಬಗಳಿಗೆ ಹಸ್ತಾಂತರಿಸಲಾಗುವುದು. ಅಪಘಾತದ ನಂತರ ಎರಡೂ ವಾಹನಗಳಿಗೆ ಬೆಂಕಿ ಆವರಿಸಿದ್ದು, ರಕ್ಷಣಾ ಮತ್ತು ಅಗ್ನಿಶಾಮಕ ತಂಡಗಳಿಗೆ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲು ತುಂಬಾ ಕಷ್ಟಕರವಾಗಿತ್ತು ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

Leave a Comment

Your email address will not be published. Required fields are marked *