Ad Widget .

ತುಮಕೂರಲ್ಲೂ ಸಾವರ್ಕರ್ ಪ್ಲೆಕ್ಸ್ ಹರಿದ ಕಿಡಿಗೇಡಿಗಳು; ಬಂಧನಕ್ಕೆ ಆಗ್ರಹ

ಸಮಗ್ರ ನ್ಯೂಸ್: ಕಿಡಿಗೇಡಿಗಳು ವೀರ ಸಾವರ್ಕರ್​​ ಫೋಟೋ ಹರಿದು ಹಾಕಿರುವ ಘಟನೆ ತುಮಕೂರು ನಗರದ ಎಂಪ್ರೆಸ್ ಕಾಲೇಜು ಮುಂಭಾಗದಲ್ಲಿ ನಡೆದಿದೆ.

Ad Widget . Ad Widget .

ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಜ್ಯೋತಿ ಗಣೇಶ್, ತುಮಕೂರು ನಗರದ ವಿವಿಧ ಭಾಗಗಳಲ್ಲಿ 80 ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರವಿರುವ ಫ್ಲೆಕ್ಸ್​ ಹಾಕಿಸಿದ್ದರು.

Ad Widget . Ad Widget .

ಮೂರು ದಿನಗಳ ಹಿಂದೆ ಫ್ಲೆಕ್ಸ್​ ಹಾಕಲಾಗಿದ್ದು, ನಿನ್ನೆ ರಾತ್ರಿ ಕಿಡಿಗೇಡಿಗಳು ವೀರ ಸಾರ್ವಕರ್ ಭಾವಚಿತ್ರ ಇರುವ ಫ್ಲೆಕ್ಸ್​ ಅನ್ನು ಮಾತ್ರ ಹರಿದು ಹಾಕಿದ್ದಾರೆ. ತುಮಕೂರು ನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಫ್ಲೆಕ್ಸ್ ಹರಿದ ಕಿಡಿಗೇಡಿಗಳಿಗೆ ಕಂಡಲ್ಲಿ ಗುಂಡು ಹೊಡೆಯಬೇಕು ಎಂದು ಬಿಜೆಪಿ ಮುಖಂಡ ಸೊಗಡು ಶಿವಣ್ಣ ಆಗ್ರಹಿಸಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಜಿಲ್ಲೆಯ ಜನ ಶಾಂತಿ, ನೆಮ್ಮದಿಯಿಂದ ಬದುಕುತ್ತಿದ್ದಾರೆ. ಜಿಲ್ಲೆ ಮತ್ತೊಂದು ಶಿವಮೊಗ್ಗ, ಕೆ.ಜೆ.ಹಳ್ಳಿ, ಡಿ.ಜೆ.ಹಳ್ಳಿಯಾಗುವುದು ಬೇಡ. ಪೊಲೀಸ್ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ಆರೋಪಿಗಳನ್ನು ಬಂಧಿಸಬೇಕು’ ಎಂದು ಆಗ್ರಹಿಸಿದರು.

ಸಾವರ್ಕರ್ ಕಂಡರೆ ಕೆಲವರಿಗೆ ಭಯ. ಅದಕ್ಕಾಗಿ ಫ್ಲೆಕ್ಸ್ ಹರಿದಿದ್ದಾರೆ. ನಗರದಲ್ಲಿನ ಎಲ್ಲ ಫ್ಲೆಕ್ಸ್‌ಗಳನ್ನು ತೆಗೆದು ಹಾಕಿರುವುದು ತಪ್ಪು. ಫ್ಲೆಕ್ಸ್ ತೆರವುಗೊಳಿಸಿದ ಪಾಲಿಕೆಯ ಆಯುಕ್ತರನ್ನು ಅಮಾನತುಗೊಳಿಸಬೇಕು. ರಾಷ್ಟ್ರದ ಏಕತೆಗೆ ಧಕ್ಕೆ ತರುವ, ಶಾಂತಿ, ಸುವ್ಯವಸ್ಥೆ ಹಾಳು ಮಾಡುವವರನ್ನು ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.

Leave a Comment

Your email address will not be published. Required fields are marked *