ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ನೇಮಕಾತಿ ಆರಂಭವಾಗಿದ್ದು, ನಾಳೆ ಅಂದರೆ ಆಗಸ್ಟ್ 18ರಂದು ವಾಕ್ ಇನ್ ಇಂಟರ್ವ್ಯೂ ಮೂಲಕ ನೇರ ನೇಮಕಾತಿ ನಡೆಯಲಿದೆ. ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುವುದು. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಗಸ್ಟ್ 18 ರಂದು ನಡೆಯುವ ವಾಕ್ ಇನ್ ಇಂಟರ್ವ್ಯೂ ನಲ್ಲಿ ಭಾಗವಹಿಸಬಹುದು
ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಒಂದು ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುವುದು.ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಗಸ್ಟ್ 18 ರಂದು ನಡೆಯುವ ವಾಕ್ ಇನ್ ಇಂಟರ್ವ್ಯೂ ನಲ್ಲಿ ಭಾಗಿಯಾಗಬಹುದಾಗಿದೆ.
ಈ ಹುದ್ದೆಗಳನ್ನು ಸಂಪೂರ್ಣವಾಗಿ ತಾತ್ಕಾಲಿಕ ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲಾಗುವುದು.
ಹುದ್ದೆ ಮಾಹಿತಿ ಹುದ್ದೆ ವಿವರ
ವಿಶ್ವವಿದ್ಯಾಲಯದ ಹೆಸರು: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ
ಹುದ್ದೆ: ಸೀನಿಯರ್ ರಿಸರ್ಚ್ ಫೆಲೋ
ಹುದ್ದೆಗಳ ಸಂಖ್ಯೆ: 1
ಕಾರ್ಯ ನಿರ್ವಹಣೆ ಸ್ಥಳ: ಧಾರವಾಡ
ವೇತನ: 31000 ರೂ ಪ್ರತಿ ತಿಂಗಳು
Aadhaar Card: ಇನ್ಮುಂದೆ ಆಧಾರ್ ಇಲ್ಲದೇ ಸಬ್ಸಿಡಿಗಳು ಇಲ್ಲ! ಕೇಂದ್ರ ಸರ್ಕಾರದ ಮಹತ್ವದ ಸುತ್ತೋಲೆ..
ಶೈಕ್ಷಣಿಕ ಅರ್ಹತೆ: ಯುಎಎಸ್ ಧಾರವಾಡ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಅಗ್ರಿಕಲ್ಚರ್ ಇಂಜಿನಿಯರಿಂಗ್, ಬ್ಯಾಚುಲರ್ ಪದವಿಯಲ್ಲಿ ಎಂಟೆಕ್ ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯುಎಎಸ್ ಧಾರವಾಡ ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.
ಆಯ್ಕೆ ವಿಧಾನ: ನೇರ ಸಂದರ್ಶನ
ವಿಶೇಷ ಸೂಚನೆ : ಈ ಹುದ್ದೆಗೆ ನೇರ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು 100 ರೂ ಛಾಪಾ ಕಾಗದ ಮೇಲೆ ತಾವು ತಾತ್ಕಾಲಿಕ ಹುದ್ದೆಗೆ ಆಯ್ಕೆಯಾಗುತ್ತಿರುವುದಾಗಿ ನಿಗದಿತ ಅರ್ಜಿಯಲ್ಲಿ ಮುಚ್ಚಳಿಕೆ ಬರೆದುಕೊಡಬೇಕು.