Ad Widget .

ಹುಟ್ಟುಹಬ್ಬದ ಪಾರ್ಟಿಯಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ| ಪಾನೀಯದಲ್ಲಿ ಅಮಲು ಪದಾರ್ಥ ನೀಡಿ ಕೃತ್ಯ

ಸಮಗ್ರ ನ್ಯೂಸ್: ಹುಟ್ಟುಹಬ್ಬದ ಪಾರ್ಟಿಯಲ್ಲಿ ಯುವತಿಗೆ ನಿದ್ರಾಜನಕ ಬೆರೆಸಿದ ಪಾನೀಯ ಕುಡಿಸಿದ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣ ಗಾಝಿಯಾಬಾದ್ ಜಿಲ್ಲೆಯ ಮೋದಿ ನಗರದಲ್ಲಿ ನಡೆದಿದೆ. ಆರೋಪಿಗಳಾದ ಶೇಖರ್, ಕೃಷ್ಣ ಮತ್ತು ಅರ್ಜುನ್ ಎಂಬವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Ad Widget . Ad Widget .

ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಯುವತಿ ರವಿವಾರ ರಾತ್ರಿ ಹುಟ್ಟುಹಬ್ಬದ ಪಾರ್ಟಿಯೊಂದಕ್ಕೆ ಹೋಗಿದ್ದಾಗ ಆಕೆಗೆ ನಿದ್ರಾಜನಕ ಬೆರೆಸಿದ ಪಾನೀಯ ನೀಡಲಾಗಿದೆ. ಬಳಿಕ ವ್ಯಕ್ತಿಯೊಬ್ಬ ಆಕೆಯನ್ನು ಕೊಠಡಿಗೆ ಕರೆದೊಯ್ದು ತನ್ನ ಸ್ನೇಹಿತರನ್ನೂ ಕರೆದು ಒಬ್ಬರ ಬಳಿಕ ಮತ್ತೊಬ್ಬರಂತೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

Ad Widget . Ad Widget .

ಯುವತಿಯನ್ನು ವೈದ್ಯಕೀಯ ತಪಾಸಣೆಗೆ ಗುರಿಪಡಿಸಲಾಗಿದ್ದು, ಸಾಮೂಹಿಕ ಅತ್ಯಾಚಾರ ನಡೆದಿರುವುದನ್ನು ವೈದ್ಯಕೀಯ ವರದಿ ದೃಢಪಡಿಸಿದೆ. ಆರೋಪಿಗಳಾದ ಶೇಖರ್, ಕೃಷ್ಣ ಮತ್ತು ಅರ್ಜುನ್ ಎಂಬುವವರನ್ನು ಬಂಧಿಸಲಾಗಿದೆ ಎಂದು ಗ್ರಾಮೀಣ ಎಎಸ್ಪಿ ಐರಾಜ್ ರಾಜಾ ಹೇಳಿದ್ದಾರೆ.

Leave a Comment

Your email address will not be published. Required fields are marked *