Ad Widget .

ಅಡಿಕೆ ಆಮದು ಸುಂಕ ಹೆಚ್ಚಳಕ್ಕೆ ಕೇಂದ್ರಕ್ಕೆ ರಾಜ್ಯ ನಿಯೋಗ ಮನವಿ

ಸಮಗ್ರ ನ್ಯೂಸ್: ವಿದೇಶಗಳಿಂದ ಆಮದಾಗುವ ಅಡಿಕೆ ಮೇಲಿನ ಆಮದು ಸುಂಕ ಹೆಚ್ಚಿಸಬೇಕು. ಅಡಿಕೆ ಆಧರಿತ ಉತ್ಪನ್ನಗಳ ಮೇಲಿನ ಜಿಎಸ್‌ಟಿ ಪ್ರಮಾಣವನ್ನು ಇಳಿಕೆ ಮಾಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ನೇತೃತ್ವದ ನಿಯೋಗ ಕೇಂದ್ರ ಸಚಿವರಕ್ಕೆ ಮನವಿ ಮಾಡಿದೆ.

Ad Widget . Ad Widget .

ದೆಹಲಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಜವಳಿ ವಾಣಿಜ್ಯ ಮತ್ತು ಕೈಗಾರಿಕೆ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಪಿಯೂಷ್ ಗೋಯಲ್, ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಶೋಭಾ ಕರಂದ್ಲಾಜೆ ಅವರನ್ನು ನಿಯೋಗ ಭೇಟಿ ಮಾಡಿದೆ.

Ad Widget . Ad Widget .

ಭೇಟಿ ವೇಳೆ ಪ್ರತಿ ಕೆಜಿ ಬಿಳಿ ಅಡಿಕೆಗೆ 360 ರೂಪಾಯಿ, ಕೆಂಪು ಅಡಿಕೆಗೆ 408 ರೂಪಾಯಿಗೆ ಬೆಲೆ ನಿಗದಿ ಮಾಡಬೇಕು ಎಂದು ಮನವಿ ಮಾಡಿದರು. ಎಂಟು ವರ್ಷದ ಹಿಂದೆ ಅಡಿಕೆಗೆ 251 ರೂಪಾಯಿ ಬೆಲೆ ನಿಗದಿಯಾಗಿತ್ತು. ಈಗ ಬೆಳೆ ಬೆಳೆಯಲು ಹೆಚ್ಚಿನ ಹಣ ವ್ಯಯವಾಗುತ್ತಿದ್ದು, ಬೆಲೆ ಪರಿಷ್ಕರಣೆಯಾಗಬೇಕು ಎಂದು ಮನವಿ ಮಾಡಿದರು.

ಅಲ್ಲದೇ ವಿದೇಶಗಳಿಂದ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದ ಅಡಿಕೆ ಭಾರತಕ್ಕೆ ಆಮದಾಗುತ್ತಿದೆ. ಇದರಿಂದ ಭಾರತದ ರೈತರಿಗೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆ ಆಮದು ಸುಂಕ ಹೆಚ್ಚಿಸಿ ದೇಶದ ರೈತರಿಗೆ ಅನುಕೂಲ ಮಾಡಿಕೊಡಬೇಕು. ಇದರ ಜೊತೆಗೆ ಅಡಿಕೆ ಉತ್ಪನ್ನಗಳ ಮೇಲಿನ ಜಿಎಸ್‌ಟಿಯನ್ನು 28% ನಿಂದ ಕಡಿಮೆ ಮಾಡಬೇಕು ಎಂದು ಕೋರಿದರು

Leave a Comment

Your email address will not be published. Required fields are marked *