Ad Widget .

ಚುನಾವಣಾ ತಂತ್ರಗಾರಿಕೆ‌ ಭಾಗವಾಗಿ‌‌ ತಿಂಗಳಿಗೊಮ್ಮೆ ರಾಜ್ಯಕ್ಕೆ ಮೋದಿ ಕರೆಸುವ ಪ್ರಯತ್ನ – ಬಿಎಸ್ವೈ

ಸಮಗ್ರ ನ್ಯೂಸ್: ಪಕ್ಷದ ಸಂಘಟನೆ, ಚುನಾವಣಾ ತಂತ್ರಗಾರಿಕೆ ಭಾಗವಾಗಿ ಪ್ರತಿ ತಿಂಗಳಿಗೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಕ್ಕೆ ಕರೆ ತರಲು ಪ್ರಯತ್ನಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಪಕ್ಷದ ಸಂಸದೀಯ ಮಂಡಳಿ ಸದಸ್ಯರಾಗಿ ನೇಮಕವಾದ ಹಿನ್ನೆಲೆಯಲ್ಲಿ ‘ಕಾವೇರಿ’ ನಿವಾಸದಲ್ಲಿ ಸಿಎಂ ಬೊಮ್ಮಾಯಿ ಆದಿಯಾಗಿ ಪಕ್ಷದ ಹಲವು ನಾಯಕರ ಜತೆಗೂಡಿ ಮಾಧ್ಯಮಗೋಷ್ಠಿಯಲ್ಲಿ ಬುಧವಾರ ಮಾತನಾಡಿದರು.

Ad Widget . Ad Widget .

ವರಿಷ್ಠರು ತೆಗೆದುಕೊಂಡ ನಿರ್ಧಾರದಿಂದ ಆನೆ ಬಲ ಬಂದಂತಾಗಿದ್ದು, ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುವೆ. ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಪ್ರವಾಸ ಮಾಡಿ ಪಕ್ಷದ ಸಂಘಟನೆ ಬಲಪಡಿಸುವ ಪ್ರಾಮಾಣಿಕವಾಗಿ ಪ್ರಯತ್ನಿಸುವೆ ಎಂದರು. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಪಕ್ಷದ ಸಂಘಟನೆಗಾಗಿ ರಾಜ್ಯ ಪ್ರವಾಸದ ಕುರಿತು ಪ್ರಧಾನಿ ಮೋದಿ ಜತೆ ಮಾತನಾಡಿದ್ದೆ. ಅವರು ದಕ್ಷಿಣ ಭಾರತದ ಕಡೆಗೆ ಗಮನ ನೀಡಬೇಕು ಎಂದಿದ್ದರು. ಅದರಂತೆಯೇ ದೊಡ್ಡ ಜವಾಬ್ದಾರಿ ನೀಡಿದ್ದು, ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಷಾ ಇಟ್ಟಿರುವ ನಂಬಿಕೆ ಉಳಿಸಿಕೊಳ್ಳುವೆ. ಮುಂದಿನ 10 ವರ್ಷಗಳಲ್ಲಿ ಕೈ, ಕಾಲು ಗಟ್ಟಿಯಿರುವ ತನಕ ರಾಜ್ಯ ಸುತ್ತುವೆ. ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಪಕ್ಷದ ಬೆಳವಣಿಗೆಗೆ ಶ್ರಮಿಸುವೆ. ವರಿಷ್ಠರು ನನ್ಮ ಮೇಲಿಟ್ಟಿರುವ ವಿಶ್ವಾಸದಂತೆ ಕೆಲಸ ಮಾಡಿ ತೋರಿಸುವೆ ಎಂದು ಬಿಎಸ್​ವೈ ಉಮೇದಿಯಿಂದ ಹೇಳಿದರು.

Ad Widget . Ad Widget .

Leave a Comment

Your email address will not be published. Required fields are marked *