Ad Widget .

ಅಬಕಾರಿ ಹಗರಣ; ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿ 15 ಮಂದಿ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್: ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ 15 ಆರೋಪಿಗಳನ್ನು ಕೇಂದ್ರೀಯ ತನಿಖಾ ದಳ ತನ್ನ ಎಫ್‌ಐಆರ್ ನಲ್ಲಿ ಪಟ್ಟಿ ಮಾಡಿದೆ. ಮನೀಶ್ ಸಿಸೋಡಿಯಾ ಅವರ ನಿವಾಸ ಸೇರಿದಂತೆ 19 ಸ್ಥಳಗಳಲ್ಲಿ ತನಿಖಾ ಸಂಸ್ಥೆ ಶುಕ್ರವಾರ ದಾಳಿ ನಡೆಸಿದೆ.

Ad Widget . Ad Widget .

ಕಳೆದ ವರ್ಷ ನವೆಂಬರ್ನಲ್ಲಿ ಜಾರಿಗೆ ತಂದ ದೆಹಲಿ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ಎಫ್‌ಐಆರ್ ದಾಖಲಿಸಿದ ನಂತ್ರ ಕೇಂದ್ರೀಯ ತನಿಖಾ ದಳ (CBI), ಶುಕ್ರವಾರ ಐಎಎಸ್ ಅಧಿಕಾರಿ ಮತ್ತು ಮಾಜಿ ದೆಹಲಿ ಅಬಕಾರಿ ಆಯುಕ್ತ ಅರಾವ ಗೋಪಿ ಕೃಷ್ಣ ಅವರ ದೆಹಲಿ ನಿವಾಸ ಸೇರಿ ಏಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಇತರ 19 ಸ್ಥಳಗಳ ಮೇಲೆ ದಾಳಿ ನಡೆಸಿದೆ.

Ad Widget . Ad Widget .

Leave a Comment

Your email address will not be published. Required fields are marked *