ಕೆಎಂಎಫ್ ನಲ್ಲಿ ಕೆಲಸ ಕೊಡಿಸುವುದಾಗಿ 138ಕ್ಕೂ ಅಧಿಕ ಮಂದಿಗೆ ವಂಚನೆ| ಆರೋಪಿಯನ್ನು ಬಂಧಿಸಿದ ಮಂಗಳೂರು ಪೊಲೀಸರು

ಸಮಗ್ರ ನ್ಯೂಸ್: ಕೆಎಂಎಫ್‌ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 138ಕ್ಕೂ ಅಧಿಕ ಮಂದಿಯನ್ನು ನಂಬಿಸಿ ಕೋಟ್ಯಾಂತರ ರೂ. ಪಂಗನಾಮ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

Ad Widget ... ..

ರಾಮ್‌ ಪ್ರಸಾದ್‌ (37) ಬಂಧಿತ ಆರೋಪಿ. ರಾಮ್‌ ಪ್ರಸಾದ್‌ ತಾನು ಕೆಎಂಎಫ್‌ ಉದ್ಯೋಗಿ ಎಂದು ತಿರುಗಾಡುತ್ತಿದ್ದ. ನಿರುದ್ಯೋಗಿಗಳಿಗೆ ಮಂಗಳೂರಿನ ಕೆಎಂಎಫ್‌ನ ವಿವಿಧ ವಿಭಾಗಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಂತ ಹಂತವಾಗಿ ಹಣ ವಸೂಲಿ ಮಾಡುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

Ad Widget

ಕೆಲಸ ಕೊಡಿಸುವುದಾಗಿ ನಂಬಿಸಿ 138ಕ್ಕೂ ಅಧಿಕ ಮಂದಿಯಿಂದ 1.84 ಕೋಟಿಗಿಂತಲೂ ಅಧಿಕ ಹಣವನ್ನು ಪಡೆದುಕೊಂಡು, ನಕಲಿ ಕೆಎಂಎಫ್ ಐಡಿ ಕಾರ್ಡ್‌, ನೇಮಕಾತಿ ಪತ್ರ ನೀಡಿ ಮೋಸ ಮಾಡಿದ್ದಾನೆ ಎಂದು ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾನೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Leave a Comment

Your email address will not be published. Required fields are marked *