ಟ್ರಕ್ ಮತ್ತು ಕಾರು ನಡುವೆ ಅಪಘಾತ| ಒಂದೇ ಕುಟುಂಬದ ನಾಲ್ವರು ದುರ್ಮರಣ

ಸಮಗ್ರ ನ್ಯೂಸ್: ನಿಂತಿದ್ದ ಟ್ರಕ್‌ಗೆ ಎಸ್‌ಯುವಿ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಗುರುವಾರ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇ (ಡಿಎಂಇ) ನಲ್ಲಿ ಈ ಭೀಕರ ಅಪಘಾತ ನಡೆದಿದೆ.

Ad Widget ... ..

ಇಲ್ಲಿನ ಕುಶಾಲಿಯಾ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಐವರು ಪ್ರಯಾಣಿಸುತ್ತಿದ್ದ ಎಸ್‌ಯುವಿ ಕಾರು ಟ್ರಕ್‌ಗೆ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಈ ವೇಳೆ 10 ವರ್ಷದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

ಮೃತರನ್ನು ಸುಮಿತ್ (34), ಯಾಗಿತ್ (7), ತೇಜ್‌ಪಾಲ್ (48) ಮತ್ತು ಅವರ ಪತ್ನಿ ಬಬ್ಲಿ (40) ಎಂದು ಗುರುತಿಸಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅಪಘಾತದ ನಂತರ ಅಪರಿಚಿತ ಟ್ರಕ್‌ನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *